ಚಾಮರಾಜನಗರ: ಚಾಮರಾಜನಗರ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ.ಬಿ.ಟಿ.ಕವಿತಾ ಅವರು ಬುಧವಾರ ಅಧಿಕಾರ ಸ್ವೀಕರಿಸಿದರು.
ಹೆಚ್ಚುವರಿ ಪೊಲೀಸ್ ಅಧೀಕ್ಷಕ ಉದೇಶ ಅವರಿಂದ ಅಧಿಕಾರ ಸ್ವೀಕರಿಸಿದರು. ವಿಶೇಷವೆಂದರೆ ಇವರ ಪತಿ ಚಾಮರಾಜನಗರ ಅಬಕಾರಿ ಇಲಾಖೆ ಉಪ ಆಯುಕ್ತರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಚಾಮರಾಜನಗರದಲ್ಲಿ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪದ್ಮಿನಿ ಸಾಹು ಅವರನ್ನು ಬೆಂಗಳೂರಿಗೆ ವರ್ಗ ಮಾಡಲಾಗಿದ್ದು, ಕವಿತಾ ಅವರು ನಾಗರಿಕ ಹಕ್ಕು ನಿರ್ದೇಶನಾಲಯದ ಎಸ್ಪಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಕವಿತಾ ಅವರು 2016ರ ಕರ್ನಾಟಕ ಕೇಡರ್ ನ ಅಧಿಕಾರಿಯಾಗಿದ್ದಾರೆ.
ಪತಿ ನಾಗಶಯನ ಅಬಕಾರಿ ಇಲಾಖೆ ಉಪ ಆಯುಕ್ತರಾಗಿದ್ದರೇ ಪತ್ನಿ ಈಗ ಚಾಮರಾಜನಗರ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದಾರೆ. ಪತ್ನಿ ಅಧಿಕಾರ ಸ್ವೀಕಾರದಂದು ಪತಿಯೂ ಹಾಜರಾಗಿ ಶುಭ ಕೋರಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿ, ಚಾಮರಾಜನಗರ ಜಿಲ್ಲೆಯು ಎರಡು ರಾಜ್ಯಗಳ ಗಡಿ ಹಂಚಿಕೊಂಡಿದ್ದು ಚಾಮರಾಜನಗರವನ್ನು ಸುರಕ್ಷಿತ ಜಿಲ್ಲೆ ಮತ್ತು ಜನಸ್ನೇಹಿ ಪೊಲೀಸ್ ಮಾಡಲು ಮೊದಲ ಆದ್ಯತೆ. ಅಪಘಾತಗಳು, ಕಳವು ಪ್ರಕರಣ ಹೆಚ್ಚಾಗುತ್ತಿದ್ದು ಇದಕ್ಕೆ ಕಡಿವಾಣ ಹಾಕಲಾಗತ್ತದೆ ಎಂದು ಅಭಯ ನೀಡಿದರು.
ಪತಿಯೂ ಜಿಲ್ಲೆಯಲ್ಲಿ ಅಧಿಕಾರಿ ಆಗಿರುವುದಕ್ಕೆ ಪ್ರತಿಕ್ರಿಯಿಸಿ, ಇಬ್ಬರು ಸರ್ಕಾರಿ ನೌಕರರಾಗಿದ್ದು ಮೊದಲ ಕರ್ತವ್ಯಕ್ಕೆ ಆದ್ಯತೆ ಬಳಿಕ ವೈಯಕ್ತಿಕ ವಿಚಾರ ಎಂದು ಹೇಳಿದರು.
ಇದನ್ನೂ ಓದಿ:Shivamogga: ಕಾರಿನ ಮೇಲೆ ಮಗುಚಿ ಬಿದ್ದ ಬಸ್… ಕಾರು ಚಾಲಕ ಸ್ಥಳದಲ್ಲೇ ಮೃತ್ಯು