ಚಾಮರಾಜನಗರ: ತಾಲೂಕಿನ ಮಾದಾಪುರದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ಕೊರೊನಾಯೋಧರಿಗಾಗಿ ಆರಂಭಿಸಿರುವ ಕೋವಿಡ್ ಆರೈಕೆ ಕೇಂದ್ರ ಹಾಗೂನಗರದಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರದಲ್ಲಿರುವ ಕೋವಿಡ್ ಆರೈಕೆ ಕೇಂದ್ರಕ್ಕೆ ಜಿಲ್ಲಾ ಪೊಲೀಸ್ ಇಲಾಖೆಯಿಂದ ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಲಾಯಿತು.
ಎಸ್ಪಿ ದಿವ್ಯಾ ಸಾರಾ ಥಾಮಸ್ ಕೋವಿಡ್ ಕೇರ್ ಸೆಂಟರ್‌ಗೆ ಭೇಟಿನೀಡಿ ಕೋವಿಡ್ ಕೇರ್ ಸೆಂಟರ್‌ನ ನೋಡಲ್ ವೈದ್ಯಾಧಿಕಾರಿಯವರಿಗೆಆಮ್ಲಜನಕ ಸಾಂದ್ರಕಗಳನ್ನು ಹಸ್ತಾಂತರಿಸಿದರು.
ಈ ವೇಳೆ ದಿವ್ಯಾ ಸಾರಾಥಾಮಸ್ ಮಾತನಾಡಿ, ಮಾದಾಪುರದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಮುಂಚೂಣಿ ಕಾರ್ಯಕರ್ತರಾಗಿರುವ ಕೊರೊನಾ ವಾರಿಯರ್ಗಳಿಗೆ ಆರೈಕೆ ಮಾಡಲಾಗುತ್ತಿದೆ. ಸೆಂಟರ್‌ನಲ್ಲಿ ಸೋಂಕಿತರ ಚಿಕಿತ್ಸೆಗಾಗಿ ಬಳಸಲು ಆಮ್ಲಜನಕ ಸಾಂದ್ರಕಗಳನ್ನು ನೀಡಲಾಗಿದೆ ಎಂದರು.
ಈಗಾಗಲೇ ಪೊಲೀಸ್ ಇಲಾಖೆ ವತಿಯಿಂದ ಗುಂಡ್ಲುಪೇಟೆ ಹಾಗೂ ಹನೂರು ಆಸ್ಪತ್ರೆಗಳಿಗೆ ಆಮ್ಲಜನಕ ಸಾಂದ್ರಕಗಳನ್ನು ಕೊಡುಗೆಯಾಗಿ ನೀಡಲಾಗಿದೆಎಂದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್, ಡಿವೈಎಸ್‌ಪಿ ಪ್ರಿಯದರ್ಶಿನಿ ಸಾಣಿಕೊಪ್ಪ, ಮಾದಾಪುರ ಕೋವಿಡ್‌ಕೇರ್ ಸೆಂಟರ್‌ನ ನೋಡಲ್ ವೈದ್ಯಾಧಿಕಾರಿ ಡಾ. ಗಾಯತ್ರಿ, ಕೋವಿಡ್‌ಕೇರ್ ಸೆಂಟರ್‌ನ ನೋಡಲ್ ವೈದ್ಯಾಧಿಕಾರಿ ಅಜಯ್ ಇತರರಿದ್ದರು.