Advertisement

ಪತ್ನಿಯ ಮೃತದೇಹವನ್ನು ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಹೆಗಲ ಮೇಲೆ ಹೊತ್ತೋಯ್ದ ಗಂಡ…

09:39 PM Dec 07, 2022 | Team Udayavani |

ಯಳಂದೂರು (ಚಾಮರಾಜನಗರ ಜಿಲ್ಲೆ): ತನ್ನ ಪತ್ನಿ ಮೃತಪಟ್ಟ ಹಿನ್ನೆಲೆಯಲ್ಲಿ ಈಕೆಯನ್ನು ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಸಾಗಿಸಿದ ಘಟನೆ ಪಟ್ಟಣದಲ್ಲಿ ಮಂಗಳವಾರ ನಡೆದಿದೆ.

Advertisement

ಮೃತ ಮಹಿಳೆಯನ್ನು ಕಾಳಮ್ಮ(26) ಎಂದು ಗುರುತಿಸಲಾಗಿದ್ದು ಈಕೆಯ ಗಂಡ ರವಿ ಎಂಬಾತನನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಈಕೆಯನ್ನು ಮಳವಳ್ಳಿ ತಾಲೂಕಿನ ಕಾಗೆಪುರ ಗ್ರಾಮದವಳು ಎಂದು ಗುರುತಿಸಲಾಗಿದೆ. ರವಿ ಹಾಗೂ ಕಾಳಮ್ಮ ಇಬ್ಬರು ಪ್ಲಾಸ್ಟಿಕ್ ಆಯುವವರಾಗಿದ್ದು ತಾಲೂಕಿನ ಕಂದಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 209 ರ ಬಳಿ ಪಾಳು ಬಿದ್ದಿರುವ ಮನೆಯೊಂದರಲ್ಲಿ ವಾಸವಾಗಿದ್ದರು.

ರವಿಯ ಪತ್ನಿ ಅಸ್ವಸ್ಥಳಾಗಿದ್ದು ರಾತ್ರಿ ಮಲಗಿದ್ದ ವೇಳೆ ಮೃತಪಟ್ಟಿದ್ದು ರವಿ ಬೆಳಿಗ್ಗೆ ಎದ್ದು ನೋಡಿದಾಗ ಪತ್ನಿ ಮೃತಪಟ್ಟಿರುವುದು ದೃಢಪಟ್ಟಿದೆ. ಈಕೆಯ ಅಂತ್ಯಸಂಸ್ಕಾರಕ್ಕೆ ರವಿಯ ಬಳಿ ಹಣವಿಲ್ಲದೆ ಪ್ಲಾಸ್ಟಿಕ್ ಚೀಲದಲ್ಲಿ ಕಟ್ಟಿ ಹೆಗಲಮೇಲೆ ಹೊತ್ತು ಪಟ್ಟಣದ ಅಗ್ರಹಾರ ಬೀದಿಯಲ್ಲಿ ಸಾಗುತ್ತಿದ್ದ ವೇಳೆ ಯಾರೋ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ವಿಚಾರ ತಿಳಿದು ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಿಳೆಯ ಮೃತ ದೇಹವನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ತಂದು ಮರಣೋತ್ತರ ಪರೀಕ್ಷೆ ನಡೆಸಿ, ಬಳಿಕ ಪೊಲೀಸರೇ ಅಂತ್ಯ ಸಂಸ್ಕಾರ ನಡೆಸಿದರು.

Advertisement

ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಸಾವಿನ ಬಗ್ಗೆ ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ: ಫೆಬ್ರವರಿಯಲ್ಲಿ ಬೆಂಗಳೂರಿನಲ್ಲಿ ಏರ್ ಶೋ: ಪ್ರಧಾನಿ ಮೋದಿಯವರಿಂದ ಉದ್ಘಾಟನೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next