Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ತುಮಕೂರಿನಲ್ಲಿ ಗೃಹಸಚಿವ ಪರಮೇಶ್ವರ್ ಮನೆಗೆ ಮುತ್ತಿಗೆ ಯತ್ನ
Team Udayavani, Jan 16, 2025, 2:46 AM IST
ಬೆಂಗಳೂರು/ಹುಬ್ಬಳ್ಳಿ: ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕತ್ತರಿಸಿದ ಪ್ರಕರಣ ಖಂಡಿಸಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಬಿಜೆಪಿ ರೈತ ಮೋರ್ಚಾ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ತುಮಕೂರಿನಲ್ಲಿ ಗೃಹ ಸಚಿವ ಡಾ| ಜಿ. ಪರಮೇಶ್ವರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ಶಾಸಕ ಬಿ.ಸುರೇಶ್‌ಗೌಡ ಸೇರಿದಂತೆ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದು ಅನಂತರ ಬಿಡುಗಡೆಗೊಳಿಸಿದರು.
ಗೋವುಗಳ ಮೇಲಿನ ಅಮಾನುಷ ಕ್ರೌರ್ಯ ಖಂಡಿಸಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ (ಫ್ರೀಡಂ ಪಾರ್ಕ್) ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆ ಸಲಾಯಿತು. ಗೋವುಗಳನ್ನು ರಕ್ಷಿಸಿ, ಗೋವುಗಳನ್ನು ಉಳಿಸಿ ಎಂದು ಘೋಷಣೆ ಕೂಗಿದ ಪ್ರತಿಭಟನಾಕಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾವಚಿತ್ರಕ್ಕೆ ಸೆಗಣಿ ಎರಚಿ ಆಕ್ರೋಶ ವ್ಯಕ್ತಪಡಿಸಿದರು.
ತುಮಕೂರು ನಗರದ ಹೊರವಲಯದ ಸಿದ್ದಾರ್ಥ ನಗರದಲ್ಲಿರುವ ಗೃಹ ಸಚಿವ ಡಾ| ಜಿ.ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕಲು ಶಾಸಕ ಬಿ.ಸುರೇಶ್‌ಗೌಡ ಹಾಗೂ ಬಿಜೆಪಿ ಕಾರ್ಯಕರ್ತರು ಕೆಎಸ್ಸಾರ್ಟಿಸಿ ಬಸ್‌ನಲ್ಲಿ ಆಗಮಿಸಿದರು. ಪೊಲೀಸರ ಕಣ್ತಪ್ಪಿಸಲು ತಲೆಗೆ ಕೇಸರಿ ಶಾಲು ಸುತ್ತಿಕೊಂಡು, ಕೈಯಲ್ಲಿ ಸೆಗಣಿ ಹಿಡಿದು ಬಂದ ಸುರೇಶ್ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಹಾಸನದಲ್ಲಿ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗುತ್ತ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಪ್ರತಿಭಟನಾಕಾರರು ದುಷ್ಕರ್ಮಿಗಳ ವಿರುದ್ಧ ಕಠಿನಕ್ರಮಕ್ಕೆ ಆಗ್ರಹಿಸಿ ಮನವಿ ಸಲ್ಲಿಸಿದರು. ಬಳ್ಳಾರಿಯಲ್ಲಿ ಬಿಜೆಪಿ ರೈತ ಮೋರ್ಚಾ ಘಟಕದಿಂದ ಗೋವುಗಳೊಂದಿಗೆ ಪ್ರತಿಭಟನೆ ನಡೆಸಲಾಯಿತು. ಜಮೀರ್ ಅಹ್ಮದ್ ರಾಜೀನಾಮೆಗೆ ಆಗ್ರಹಿಸಿ ಅವರ ಭಾವಚಿತ್ರಕ್ಕೆ ಸೆಗಣಿ ಸವರಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಸಿಡಿದರು. ಮಂಡ್ಯ ನಗರದ ಜೆ.ಸಿ.ವೃತ್ತದಲ್ಲಿ ಜಮಾಯಿಸಿದ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಜಮೀರ್ ಅಹಮದ್ ಅವರ ಮುಖವಾಡಕ್ಕೆ ಸಗಣಿ ಬಳಿಯುವ ಮೂಲಕ ಕಿಡಿಕಾರಿದರು.
ಕಂಡಲ್ಲಿ ಗುಂಡಿಕ್ಕಬೇಕು
ತುಮಕೂರು: ಅಲ್ಪಸಂಖ್ಯಾತರು ಬಹುಸಂಖ್ಯಾಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡುತ್ತಾರೆ. ಅವರನ್ನು ಕಂಡಲ್ಲಿ ಗುಂಡಿಕ್ಕಬೇಕು ಎಂದು ಬಿಜೆಪಿ ಶಾಸಕ ಬಿ.ಸುರೇಶ್‌ಗೌಡ ಕಿಡಿಕಾರಿದರು. ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿ, ಸಿದ್ದರಾಮಯ್ಯ ಅವರು ತುಷ್ಠಿàಕರಣ ರಾಜಕಾರಣ ಬಿಟ್ಟು, ಯಾರು ಗೋಮಾತೆ ಮೇಲೆ ಹೀನ ಕೃತ್ಯ ಮಾಡುತ್ತಾರೋ ಅವರನ್ನು ಗುಂಡಿಕ್ಕಿ ಹೊಡೆಯಬೇಕು. ಸಚಿವ ಜಮೀರ್ ಅಹಮದ್ ಅವರು ಹಸು ಕೊಟ್ಟರೆ ಪಾಪ ಹೊರಟೋಗುತ್ತ? ಪುಣ್ಯ ಬರುತ್ತ ? ಇದಕ್ಕೆಲ್ಲ ಸಚಿವ ಜಮೀರ್ ಖಾನ್ ಕಾರಣ ಎಂದು ಅಸಮಾಧಾನ ಹೊರಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಪತ್ನಿಯ ಕಿರುಕುಳದಿಂದ ಬೇಸತ್ತಿದ್ದೇನೆಂದು ಡೆತ್‌ನೋಟ್ ಬರೆದು ಪತಿ ಆತ್ಮಹ*ತ್ಯೆ!
Run Away: ಗ್ರಾಮಸ್ಥರ ಹೆಸರಲ್ಲಿ 50 ಲಕ್ಷ ರೂ.ಸಾಲ ಪಡೆದು ದಂಪತಿ ಪರಾರಿ!
MUDA; ಸಿದ್ದರಾಮಯ್ಯ ಪತ್ನಿ, ಬೈರತಿ ಸುರೇಶ್ ಗೆ ರಿಲೀಫ್: ಇಡಿ ನೋಟಿಸ್‌ಗೆ ಹೈಕೋರ್ಟ್ ತಡೆ
Republic Day Tableau: ರಾಜ್ಯದ ‘ಲಕ್ಕುಂಡಿ’ ಸ್ತಬ್ಧಚಿತ್ರಕ್ಕೆ ವೋಟ್ ಮಾಡಿ ಗೆಲ್ಲಿಸಿ
MUDA Case: ಸಿಬಿಐಗೆ ವಹಿಸುವ ಅರ್ಜಿ ವಿಚಾರಣೆ: ತೀರ್ಪು ಕಾಯ್ದಿರಿಸಿದ ಧಾರವಾಡ ಹೈಕೋರ್ಟ್