Advertisement

“ಚಂಬಲ್‌’ಚಿತ್ರ ಪ್ರದರ್ಶನಕ್ಕೆ ತಡೆ ಕೋರಿ ಅರ್ಜಿ

12:32 AM Feb 20, 2019 | Team Udayavani |

ಬೆಂಗಳೂರು: ನೀನಾಸಂ ಸತೀಶ್‌ ನಟನೆಯ “ಚಂಬಲ್‌’ ಚಿತ್ರದ ಬಿಡುಗಡೆ ಮತ್ತು ಪ್ರದರ್ಶನಕ್ಕೆ ತಡೆ ನೀಡುವಂತೆ ಕೋರಿ ಮೃತ ಐಎಎಸ್‌ ಅಧಿಕಾರಿ ಡಿ.ಕೆ. ರವಿ ಅವರ ಹೆತ್ತವರು ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. 

Advertisement

ಅರ್ಜಿಯ ವಿಚಾರಣೆ ನಡೆಸಿದ ನ್ಯಾ| ಸುನೀಲ್‌ ದತ್‌ ಯಾದವ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಅರ್ಜಿಗೆ ಸಂಬಂಧಿಸಿದಂತೆ ನಟ ನೀನಾಸಂ ಸತೀಶ್‌ ಮತ್ತು ಚಿತ್ರ ತಂಡ, ಕೇಂದ್ರದ ಪ್ರಸಾರ ಮತ್ತು ಮಾಹಿತಿ ಸಚಿವಾಲಯ, ರಾಜ್ಯ ಗೃಹ ಇಲಾಖೆ, ಸೆನ್ಸಾರ್‌ ಮಂಡಳಿ ಪ್ರಾದೇಶಿಕ ಅಧಿಕಾರಿ ಸಹಿತ ಇತರ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಫೆ.21ಕ್ಕೆ ಮುಂದೂಡಿತು.

“ಚಂಬಲ್‌’ ಚಿತ್ರ ಫೆ.23ರಂದು ರಾಜ್ಯ ಹಾಗೂ ಹೊರ ರಾಜ್ಯಗಳ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗೊಳ್ಳಲಿದೆ. ಚಿತ್ರದ “ಟ್ರೇಲರ್‌’ ಗಮನಿಸಿದರೆ ಅದು ತಮ್ಮ ಮಗನ ಜೀವನ ಆಧರಿಸಿ ಸಿನಿಮಾ ನಿರ್ಮಿಸಲಾಗಿದೆ ಎಂಬ ಶಂಕೆ ವ್ಯಕ್ತವಾಗುತ್ತದೆ. ಈ ಚಿತ್ರದಲ್ಲಿ ತಮ್ಮ ಮಗನ ವ್ಯಕ್ತಿತ್ವ ಹಾಗೂ ಚಾರಿತ್ರ್ಯಕ್ಕೆ ಧಕ್ಕೆ ಬರುವ ರೀತಿಯಲ್ಲಿ ತೋರಿಸಲಾಗಿದೆ. ಒಂದು ವೇಳೆ ಚಿತ್ರ ಬಿಡುಗಡೆಯಾಗಿ. ಪ್ರದರ್ಶನ ಕಂಡರೆ ಡಿ.ಕೆ. ರವಿ ಅವರ ಬಗ್ಗೆ ಸಾರ್ವಜನಿಕರಲ್ಲಿ ಕೆಟ್ಟ ಅಭಿಪ್ರಾಯ ಮೂಡುತ್ತದೆ. ಹಾಗಾಗಿ ಚಿತ್ರದ ಬಿಡುಗಡೆ ಹಾಗೂ ಪ್ರದರ್ಶನಕ್ಕೆ ತಡೆ ನೀಡಬೇಕು ಎಂದು ರವಿ ಪೋಷಕರು ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next