ಬೆಂಗಳೂರು: ಇಂದು ನಿಧನರಾದ ಕನ್ನಡದ ಹಿರಿಯ ಸಾಹಿತಿ, ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಚಂದ್ರಶೇಖರ್ ಪಾಟೀಲ್ ಅವರ ಅಂತ್ಯಕ್ರಿಯೆಯನ್ನು ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಅವರು ಚಂಪಾ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಅಂತ್ಯಕ್ರಿಯೆಯನ್ನು ಚಾಮರಾಜಪೇಟೆಯ ರುದ್ರಭೂಮಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ಮಾಡಲಾಗುವುದು ಎಂದರು.
ಇದನ್ನೂ ಓದಿ:ದಿಟ್ಟ ಹೋರಾಟದ ಚಂಪಾ; ಇಂದಿರಾಗಾಂಧಿ ತುರ್ತು ಪರಿಸ್ಥಿತಿ ವಿರೋಧಿಸಿ ಅಂದು ಜೈಲು ಸೇರಿದ್ರು…
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 83 ವರ್ಷದ ಚಂದ್ರಶೇಖರ ಪಾಟೀಲ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.
Related Articles
Advertisement– CM of Karnataka (@CMOKarnataka) 10 Jan 2022