Advertisement

ಪೊಲೀಸ್ ಗೌರವಗಳೊಂದಿಗೆ ಚಂಪಾ ಅಂತ್ಯಕ್ರಿಯೆ : ಸಿಎಂ ಸೇರಿ ಗಣ್ಯರಿಂದ ಅಂತಿಮ ನಮನ

06:10 PM Jan 10, 2022 | Team Udayavani |

ಬೆಂಗಳೂರು: ಇಂದು ನಿಧನ ಹೊಂದಿದ ಹಿರಿಯ ಸಾಹಿತಿ ಚಂದ್ರಶೇಖರ್ ಪಾಟೀಲ್ ಅವರ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ಚಾಮರಾಜ ಪೇಟೆಯ ರುದ್ರಭೂಮಿಯಲ್ಲಿ ಸೋಮವಾರ ಸಂಜೆ ನೆರವೇರಿಸಲಾಯಿತು.

Advertisement

ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಗಣ್ಯರು ಅಂತ್ಯಕ್ರಿಯೆ ಯಲ್ಲಿ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.

ಕವಿ, ನಾಟಕಕಾರ, ಕನ್ನಡ ಪರ ಹೋರಾಟಗಾರ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆಗಿದ್ದ ಚಂಪಾ ಎಂದೇ ಪ್ರಸಿದ್ದರಾಗಿದ್ದ ಚಂದ್ರಶೇಖರ ಪಾಟೀಲ ಅವರು ತನ್ನ 83 ನೇ ವಯಸ್ಸಿನಲ್ಲಿ ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next