ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಘಾಟಿ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಅಂಗವಾಗಿ ಸುಬ್ರಹ್ಮಣ್ಯಸ್ವಾಮಿಗೆ ವಿಶೇಷ ಅಲಂಕಾರ, ಪೂಜಾ ಕಾರ್ಯಕ್ರಮಗಳು ನಡೆದವು.
ನಾಗಾರಾಧನೆಗೆ ಪ್ರಸಿದ್ಧವಾಗಿರುವ ಘಾಟಿ ಕ್ಷೇತ್ರದಲ್ಲಿ ಚಂಪಾ ಷಷ್ಠಿಯ ಅಂಗವಾಗಿ ಅಭಿಷೇಕ, ಮಹಾ ಮಂಗಳಾರತಿ ನಡೆಯಿತು. ಭಕ್ತರು ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿದರು.
ಈ ಬಾರಿ ಷಷ್ಠಿ ಭಾನುವಾರವಾದ್ದರಿಂದ ಸಹಸ್ರಾರು ಭಕ್ತಾದಿಗಳು ದೇವಾಲಯದ ಮುಂದೆ ಸಾಲುಗಟ್ಟಿ ನಿಂತು ಸುಬ್ರಹ್ಮಣ್ಯಸ್ವಾಮಿ ದರ್ಶನ ಪಡೆದರು. ಸಾಮಾನ್ಯವಾಗಿ ಚಂಪಾ ಷಷ್ಠಿಯಂದು ಎಲ್ಲಿ ಸುಬ್ರಹ್ಮಣ್ಯ ದೇಗುಲವಿದೆಯೋ ಅಲ್ಲೆಲ್ಲಾ ವಿಶೇಷ ಪೂಜೆಗಳು ನಡೆಯುತ್ತವೆ. ಚಂಪಾ ಷಷ್ಠಿಯಂದು ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಬ್ರಹ್ಮರಥೋತ್ಸವ ಜರುಗುತ್ತದೆ. ಆದರೆ, ಈ ಬಾರಿ ಅಲ್ಲಿಯೂ ಸಾಂಕೇತಿಕ ರಥೋತ್ಸವ ನಡೆಯಲಿದೆ. ಅಶ್ವತ್ಥ ಕಟ್ಟೆಯಲ್ಲಿ ಸರ್ಪಾಕಾರದ ವಿಗ್ರಹವನ್ನಿಟ್ಟು ಸುಬ್ರಹ್ಮಣ್ಯ ಸ್ವಾಮಿಯನ್ನು ಆವಾಹನೆ ಮಾಡಿ ಹಾಲೆರೆದುಅಭಿಷೇಕ ಮಾಡಿ ನೇವೇದ್ಯ ಅರ್ಪಿಸಿ ಅಂದು ಉಪವಾಸ ವೃತವನ್ನು ಆಚರಿಸುವ ಪದ್ಧತಿಯಿದೆ.
ಕುಕ್ಕೆಗೆ ತೆರಳಲು ಸಾಧ್ಯವಾಗದ ಭಕ್ತಾದಿಗಳುಘಾಟಿಕ್ಷೇತ್ರದಲ್ಲಿಯೇ ನಾಗಾರಾಧನೆ ಮಾಡಿ ತಮ್ಮ ಇಷ್ಟಾರ್ಥನೆರವೇರಿಸುವಂತೆ ದೇವರಲ್ಲಿ ಪ್ರಾರ್ಥಿಸುತ್ತಾರೆ. ನಾಗರಕಲ್ಲುಗಳಿಗೆ ಪೂಜೆ ಸಲ್ಲಿಸಿ ಸ್ವಾಮಿಯ ದರ್ಶನ ಪಡೆಯುತ್ತಾರೆ. ಈ ಬಾರಿ ಜನವರಿ 19ರಂದುನಡೆಯಬೇಕಿದ್ದ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮ ರಥೋತ್ಸವ ರದ್ದಾಗಿದೆ. ಭಾರೀ ದನಗಳ ಜಾತ್ರೆ ಸಹ ಚುನಾವಣೆಯ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸದ್ಯಕ್ಕೆಆರಂಭವಾಗುವ ಲಕ್ಷಣಗಳಿಲ್ಲ.
ನಟ ಧ್ರುವ ಸರ್ಜಾ ಭೇಟಿ: ಮೇಘನಾರಾಜ್ ಮಗುವಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಖ್ಯಾತ ನಟ ಧ್ರುವಸರ್ಜಾ ಅವರುಶನಿವಾರ ಸಂಜೆ ಘಾಟಿ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಮೇಘನಾರಾಜ್ ಹಾಗೂ ಮಗು ಬೇಗ ಚೇತರಿಸಿಕೊಳ್ಳುವಂತೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು.