Advertisement
ಚಾಂಪಿಯನ್ಸ್ ಟ್ರೋಫಿ 2025 ರಲ್ಲಿ ಭಾಗವಹಿಸುವ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧಿಕೃತವಾಗಿ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಗೆ (ICC) ಪತ್ರ ಬರೆದಿದೆ. ಇತ್ತೀಚಿನ ವರದಿಗಳ ಪ್ರಕಾರ, ಭದ್ರತೆಯ ಕಾರಣದಿಂದ ದುಬೈನಲ್ಲಿ ಭಾರತದ ಪಂದ್ಯಗಳನ್ನು ಆಯೋಜನೆ ಮಾಡಲು ಬಿಸಿಸಿಐ ಐಸಿಸಿ ಗೆ ವಿನಂತಿಸಿದೆ.
Related Articles
Advertisement
ಚಾಂಪಿಯನ್ಸ್ ಟ್ರೋಫಿಗಾಗಿ ಪಾಕಿಸ್ತಾನದ ಕರಾಚಿ, ಲಾಹೋರ್ ಮತ್ತು ರಾವಲ್ಪಿಂಡಿಯಲ್ಲಿ ಸ್ಟೇಡಿಯಂಗಳ ನವೀಕರಣ ಮಾಡಲಾಗಿದೆ. ಹೀಗಾಗಿ ಪಾಕಿಸ್ತಾನದಿಂದ ಸಂಪೂರ್ಣ ಕೂಟವನ್ನು ಸ್ಥಳಾಂತರಿಸುವುದು ಅಸಾಧ್ಯ ಎನ್ನಲಾಗಿದೆ. ಇದೇ ವೇಳೆ ಭಾರತದ ಪಂದ್ಯಗಳನ್ನು ದುಬೈಗೆ ಶಿಫ್ಟ್ ಮಾಡಲು ಬಿಸಿಸಿಐ ಮನವಿ ಮಾಡಿದೆ.
“ಇದು ನಮ್ಮ ನಿಲುವು ಮತ್ತು ಯಾವುದೇ ಕಾರಣ ಅದನ್ನು ಬದಲಾಯಿಸಲು ಸಾಧ್ಯವಿಲ್ಲ. ನಾವು ಅವರಿಗೆ (ಐಸಿಸಿ) ಪತ್ರ ಬರೆದಿದ್ದೇವೆ ಮತ್ತು ನಮ್ಮ ಪಂದ್ಯಗಳನ್ನು ದುಬೈಗೆ ಸ್ಥಳಾಂತರಿಸುವಂತೆ ಕೇಳಿಕೊಂಡಿದ್ದೇವೆ” ಎಂದು ಬಿಸಿಸಿಐ ಮೂಲವೊಂದ್ನು ಉಲ್ಲೇಖಿಸಿ ದಿ ಇಂಡಿಯಾ ಎಕ್ಸ್‌ಪ್ರೆಸ್ ವರದಿ ಮಾಡಿದೆ.