Advertisement

ಚಾಮರಾಜಪೇಟೆ ಮೈದಾನಕ್ಕೆ ಒಡೆಯರ್‌ ಹೆಸರಿಡಲು ಮನವಿ

08:05 PM Jul 14, 2022 | Team Udayavani |

ಬೆಂಗಳೂರು: ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ಚಾಮರಾಜೇಂದ್ರ ಒಡೆಯರ್‌ ಹೆಸರಿಡುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರಿಗೆ ಸಂಸದ ಪಿ.ಸಿ. ಮೋಹನ್‌ ಮನವಿ ಸಲ್ಲಿಸಿದರು.

Advertisement

ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಮುಖ್ಯ ಆಯುಕ್ತರನ್ನು ಭೇಟಿಯಾಗಿ ಮನವಿ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಪೇಟೆ ಮೈದಾನವು ಸಾರ್ವಜನಿಕ ಆಸ್ತಿ ಹಾಗೂ ಅದು ಆಟದ ಮೈದಾನ ಎಂಬುದು ಎಲ್ಲರಿಗೂ ತಿಳಿದಿದೆ. ಆದರೆ ಕೆಲವರು ಮೈದಾನದ ಕುರಿತು ಗೊಂದಲ ಸೃಷ್ಟಿಸುತ್ತಿದ್ದಾರೆ.

ಈ ಮೈದಾನಕ್ಕೆ ಮೈಸೂರು ಮಹಾರಾಜ ಚಾಮರಾಜೇಂದ್ರ ಒಡೆಯರ್‌ ಹೆಸರಿಡಬೇಕು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next