Advertisement
ಈ ವೇಳೆ ಬಿರುಸಿನ ಗಾಳಿ-ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
Related Articles
ನಗರದಲ್ಲಿ ಕಳೆದ ಕೆಲ ದಿನಗಳಿಂದ ಅತೀ ಕಡಿಮೆ ಉಷ್ಣಾಂಶ ದಾಖಲಾಗಿದೆ. 27.9 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 3.1 ಡಿ.ಸೆ. ಕಡಿಮೆ ಇತ್ತಿ. 25.4 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.6 ಡಿ.ಸೆ. ಉಷ್ಣಾಂಶ ಏರಿಕೆ ಕಂಡಿತ್ತು.
Advertisement
ಉಡುಪಿ: ಹಲವೆಡೆ ಧಾರಾಕಾರ ಮಳೆಉಡುಪಿ: ಜಿಲ್ಲೆಯ ಹಲವೆಡೆ ಶುಕ್ರವಾರ ಧಾರಾಕಾರ ಮಳೆ ಸುರಿದಿದೆ. ಕುಂದಾಪುರ, ಬೈಂದೂರು, ಹೆಬ್ರಿ ಭಾಗದಲ್ಲಿ ನಿರಂತರ ಮಳೆಯಾಗಿದ್ದು, ಹಲವೆಡೆ ಮನೆಗಳಿಗೆ ಹಾನಿ ಸಂಭವಿಸಿದೆ. ಗುರುವಾರ ತಡರಾತ್ರಿ, ಶುಕ್ರವಾರ ಉಡುಪಿ, ಮಣಿಪಾಲ, ಮಲ್ಪೆ, ಕಾಪು, ಬ್ರಹ್ಮಾವರ ಸುತ್ತಮುತ್ತ ಬಿಟ್ಟುಬಿಟ್ಟು ಮಳೆಯಾಗಿದೆ. ಶುಕ್ರವಾರ ಮೋಡ ಕವಿದ ವಾತಾವರಣ ನಡುವೆ ಮಧ್ಯಾಹ್ನದಿಂದ ರಾತ್ರಿವರೆಗೂ ಕೆಲಕಾಲ ವ್ಯಾಪಕ ಮಳೆಯಾಗಿದೆ. ಕಾರ್ಕಳ ನಿಟ್ಟೆಯಲ್ಲಿ ಗುರುವಾರ ಸುಶೀಲಾ ಆಚಾರ್ತಿ ಅವರ ಮನೆಗೆ ಸಿಡಿಲು ಬಡಿದು ಹಾನಿ ಸಂಭವಿಸಿದೆ. ಕಾರ್ಕಳ 7.3, ಕುಂದಾಪುರ 32.7, ಉಡುಪಿ 7.81, ಬೈಂದೂರು 36.8, ಬ್ರಹ್ಮಾವರ 10.0, ಕಾಪು 7.2, ಹೆಬ್ರಿ 31.5 ಮಿ. ಮೀ. ಮಳೆಯಾಗಿದ್ದು, ಶುಕ್ರವಾರ ಬೆಳಗ್ಗೆ 8.30ರ ಹಿಂದಿನ 24 ಗಂಟೆಗಳ ಕಾಲ ಜಿಲ್ಲೆಯಲ್ಲಿ 21.5 ಮಿ. ಮೀ. ಸರಾಸರಿ ಮಳೆಯಾಗಿದೆ. ಗಾಳಿ-ಮಳೆಯಿಂದಾಗಿ ಹಲವೆಡೆ ವಿದ್ಯುತ್ ಕಂಬ, ತಂತಿಗಳಿಗೆ ಹಾನಿ ಸಂಭವಿಸಿದೆ. ಶುಕ್ರವಾರ ಉಡುಪಿ, ಮಣಿಪಾಲ ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿತ್ತು.