Advertisement

ದಕ್ಷಿಣ, ಉತ್ತರ ಒಳನಾಡಿನಲ್ಲಿ ಮಳೆ ಸಾಧ್ಯತೆ

09:15 PM Mar 17, 2023 | Team Udayavani |

ಬೆಂಗಳೂರು: ಬೆಂಗಳೂರು ಸೇರಿ ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಗುಡುಗಿನಿಂದ ಕೂಡಿದ ಮಳೆಯಾಗಲಿದ್ದು, ಕರಾವಳಿಯಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.

Advertisement

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರು ಜಿಲ್ಲೆಗಳ ಒಂದರಡು ಕಡೆ ಮುಂದಿನ 24 ಗಂಟೆಗಳಲ್ಲಿ ಗುಡುಗಿನಿಂದ ಕೂಡಿದ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.

ಚಿಕ್ಕಬಳ್ಳಾಪುರ ಹಾಗೂ ಕೋಲಾರದ ಒಂದೆರಡು ಕಡೆ ಆಲಿಕಲ್ಲು ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರಿನಲ್ಲಿ ಸಂಜೆ ಅಥವಾ ರಾತ್ರಿ ಹಗುರದಿಂದ ಮಳೆಯಾಗುವ ಸಾಧ್ಯತೆಗಳಿವೆ. ಕರಾವಳಿಯ ಒಂದೆರಡು ಕಡೆ ಸಾಮಾನ್ಯಕ್ಕಿಂತ 2 ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 3-4 ಡಿಗ್ರಿ ಸೆಲ್ಸಿಯಸ್‌ ಹೆಚ್ಚಿನ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಮಳೆ ? : ಶುಕ್ರವಾರ ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆ ಮಳೆಯಾದರೆ, ಕರಾವಳಿಯಲ್ಲಿ ಒಣಹವೆ ಇತ್ತು. ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ 6 ಸೆಂ.ಮೀ., ಬೀದರ್‌ನ ಹಲಬರ್ಗಾ, ಜನವಾಡ, ಮನ್ನಳ್ಳಿ, ಬೆಂಗಳೂರಿನ ಕೆಎಸ್‌ಎನ್‌ಡಿಎಂಸಿ ಕ್ಯಾಂಪಸ್‌ ತಲಾ 3, ಮೈಸೂರಿನ ಹುಣಸೂರು, ಕೋಲಾರ, ಚಿಕ್ಕಬಳ್ಳಾಪುರ ತಲಾ 2, ಕಲುºರ್ಗಿಯ ಅಫ‌ಜಲಪುರ, ಮುಧೋಳ, ಯಾದಗಿರಿ ಸೈದಾಪುರ, ರಾಯಚೂರಿನ ದೇವದುರ್ಗ, ಜಾಲಹಳ್ಳಿ, ಬೆಂಗಳೂರಿನ ಕೆಐಎಎಲ್‌ ವಿಮಾನ ನಿಲ್ದಾಣ, ಗೋಪಾಲನಗರ ಎಆರ್‌ಜಿ, ತುಮಕೂರಿನ ಗುಬ್ಬಿ, ಮಧುಗಿರಿ, ರಾಮನಗರದ ಮಾಗಡಿಯಲ್ಲಿ ತಲಾ 1 ಸೆಂ.ಮೀ. ಮಳೆಯಾಗಲಿದೆ. ಕಲಬುರಗಿಯಲ್ಲಿ 36.2 ಡಿ.ಸೆ. ರಾಜ್ಯದಲ್ಲೇ ಅತ್ಯಧಿಕ ಉಷ್ಣಾಂಶ ದಾಖಲಾಗಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next