Advertisement

RAIN: ಕರಾವಳಿಯಲ್ಲಿ ಮಳೆ ಸಾಧ್ಯತೆ 

11:25 AM Oct 16, 2023 | Team Udayavani |

ಮಂಗಳೂರು: ಅರಬಿ ಸಮುದ್ರದ ಲಕ್ಷದ್ವೀಪ ಭಾಗದಲ್ಲಿ ನಿಮ್ನ ಒತ್ತಡ ಸೃಷ್ಟಿಯಾಗುವ ಸಾಧ್ಯತೆ ಇದ್ದು, ಅ.17ರ ವೇಳೆಗೆ ಆಗ್ನೇಯ ಭಾಗದತ್ತ ಚಲಿಸುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಪರಿಣಾಮ ಅ. 16ರಿಂದ 18ರ ವರೆಗೆ ಕರಾವಳಿ ಸಹಿತ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಮಳೆಯ ತೀವ್ರತೆ ಕಡಿಮೆಯಾಗಿದೆ. ರವಿವಾರ ಮಂಗಳೂರು, ಉಡುಪಿ ಸಹಿತ ಉಭಯ ಜಿಲ್ಲೆಯಾದ್ಯಂತ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕೆಲವೆಡೆ ಸಾಧಾರಣ ಮಳೆ ಸುರಿದಿದೆ. ಮಂಗಳೂರಿನಲ್ಲಿ 31.2 ಡಿ.ಸೆ. ಗರಿಷ್ಠ ಮತ್ತು 24.3 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next