Advertisement

ಬಜೆಟ್‌ ಅಧಿವೇಶನ ನಂತರ ಕುಲಪತಿ ನೇಮಕ ಪ್ರಕ್ರಿಯೆ 

06:50 AM Jun 25, 2018 | |

ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯ ಸೇರಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಕುಲಪತಿ
ಹುದ್ದೆಯ ನೇಮಕಾತಿ ಬಗ್ಗೆ ಬಜೆಟ್‌ ಅಧಿವೇಶನದ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿಯವರೊಂದಿಗೆ
ಚರ್ಚಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹೇಳಿದ್ದಾರೆ.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೂನ್‌ 27ರಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ 
ಯವರು ಉನ್ನತ ಶಿಕ್ಷಣ ಇಲಾಖೆ ಆದ್ಯತೆಗಳ ಕುರಿತು ಬಜೆಟ್‌ ಪೂರ್ವ ಸಭೆ ಕರೆದಿದ್ದಾರೆ. ಇಲಾಖೆಯ ತುರ್ತು
ಅಗತ್ಯತೆಗಳನ್ನು ಮುಖ್ಯಮಂತ್ರಿಗಳ ಮುಂದಿಡಲಿದ್ದೇವೆ. ಸರ್ಕಾರಿ ಪದವಿ ಕಾಲೇಜಿಗೆ ಮೂಲಸೌಕರ್ಯ ಕಲ್ಪಿಸುವುದೇ ನಮ್ಮ ಮೊದಲ ಆದ್ಯತೆಯಾಗಿದೆ.

ಮೈಸೂರು ವಿಶ್ವವಿದ್ಯಾಲಯ ಸೇರಿ ರಾಜ್ಯದ ಮೂರು ವಿವಿಗಳಲ್ಲಿ ಖಾಲಿ ಇರುವ ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳ ನೇಮಕ ಸಂಬಂಧ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಲಾಗುವುದು. ಅಲ್ಲದೆ, ಪದವಿ ಕಾಲೇಜಿನಲ್ಲಿ ಖಾಲಿ ಇರುವ 400 ಪ್ರಾಂಶುಪಾಲರ ಹುದ್ದೆ ನೇಮಕ ಸಂಬಂಧವೂ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಹೇಳಿದರು.

ಯುಜಿಸಿ 7ನೇ ವೇತನ ಆಯೋಗದಂತೆ ಪರಿಷ್ಕೃತ ವೇತನ ನೀಡುವಂತೆ ಪ್ರಾಧ್ಯಾಪಕರು ಮನವಿ ಮಾಡಿದ್ದಾರೆ. ಈ ಸಂಬಂಧ ಬಿಹಾರ, ಪಶ್ಚಿಮಬಂಗಾಳ, ಆಂಧ್ರಪ್ರದೇಶ ಸೇರಿ ವಿವಿಧ ರಾಜ್ಯದ ಮಾಹಿತಿಯನ್ನು ಕಲೆ ಹಾಕುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ಅವಶ್ಯವಾಗಿದ್ದು, ಹಿಂದಿನ ಸರ್ಕಾರ ಘೋಷಣೆ ಮಾಡಿದ್ದಂತೆ ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್‌ ನೀಡುತ್ತೇವೆ. ಹಂಚಿಕೆಯಲ್ಲಿ ಆಗಿರುವ ಗೊಂದಲವನ್ನು ಸರಿಪಡಿಸಲಿದ್ದೇವೆ ಎಂದರು.

Advertisement

ಕೆಎಸ್‌ಒಯು ಮಾನ್ಯತೆ ಪಡೆಯುತ್ತೇವೆ
ಮೈಸೂರಿನಲ್ಲಿರುವ ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ (ಕೆಎಸ್‌ಒಯು) ಮಾನ್ಯತೆಯನ್ನು ಪಡೆದೇ ಪಡೆ 
ಯುತ್ತೇವೆ. ಈ ಸಂಬಂಧ ನಾನೇ ಖುದ್ದಾಗಿ ವಿಶ್ವವಿದ್ಯಾಲಯ ಅನುದಾನ ಆಯೋಗದ ಮುಖ್ಯಸ್ಥರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದೇನೆ. ಕೆಎಸ್‌ಒಯು ಅಭ್ಯರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳುತ್ತೇವೆ. ವಿಶ್ವವಿದ್ಯಾಲಯದ ಭೂಮಿಯನ್ನು ಯಾರಿಗೂ ನೀಡುವುದಿಲ್ಲ ಎಂದು ಸಚಿವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next