Advertisement
ಬಸವ ಭವನದಲ್ಲಿ ಬಿ.ಡಿ.ಜತ್ತಿಯವರ ಜನ್ಮದಿನಾಚರಣೆ ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ಮತ್ತು ಮೈಸೂರು ವಿಶ್ವವಿದ್ಯಾಲಯದ ಕುಲಪತಿಗಳ ಸ್ಥಾನ ಖಾಲಿಯಾಗಿ ಆರು ತಿಂಗಳಾಗಿದೆ. ಈ ಎರಡು ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಚಿಸಿರುವ ಶೋಧನಾ ಸಮಿತಿ ಅರ್ಹರನ್ನು ಆಯ್ಕೆ ಮಾಡಿ ಸರ್ಕಾರಕ್ಕೆ ಹೆಸರು ಕಳುಹಿಸಿದೆ. ರಾಜ್ಯಸರ್ಕಾರ ಆ ಹೆಸರುಗಳನ್ನು ಶಿಫಾರಸ್ಸಿನ ಮೂಲಕ, ಯಾರನ್ನು ಕುಲಪತಿ ಮಾಡಬೇಕು ಎಂಬುದನ್ನು ರಾಜ್ಯಪಾಲರಿಗೆ ಸಲ್ಲಿಸಿದೆ. ಆದರೆ, ರಾಜ್ಯಪಾಲರು ಇನ್ನು ಒಪ್ಪಿಗೆ ನೀಡಿಲ್ಲ ಎಂದರು.
ಕಲಬುರಗಿ ರಾಜ್ಯ ವಿಶ್ವವಿದ್ಯಾಲಯಕ್ಕೆ ಜಗಜ್ಯೋತಿ ಬಸವಣ್ಣನವರ ಹೆಸರು ಇಡಲು ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ. ನವೆಂಬರ್ ಒಳಗೆ ಮರು ನಾಮಕರಣ ಮಾಡಲಿದ್ದೇವೆ. ಹಾಗೆಯೇ ಕಲುºರ್ಗಿ ಕೇಂದ್ರ ವಿಶ್ವವಿದ್ಯಾಲಯಕ್ಕೆ ಅಂಬೇಡ್ಕರ್ ಹೆಸರಿಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿ, ಪ್ರತ್ಯೇಕವಾಗಿ ಪತ್ರವನ್ನು ಬರೆದಿದ್ದೇವೆ. ಯಾವುದೇ ಪ್ರಯೋಜನವಾಗಿಲ್ಲ. ಇನ್ನೊಮ್ಮೆ ಮುಖ್ಯಮಂತ್ರಿಗಳ ಮೂಲಕ ಪತ್ರ ಬರೆಸಲಿದ್ದೇನೆ ಎಂದು ಸಚಿವ ರಾಯರೆಡ್ಡಿ ಭರವಸೆ ನೀಡಿದರು.