Advertisement

Vidyarthi Vidyarthiniyare..: ಚಂದನ್‌ ಶೆಟ್ಟಿ ಹೊಸ ಸಿನಿಮಾ ರಿಲೀಸ್‌ಗೆ ರೆಡಿ

12:30 PM Jun 10, 2024 | Team Udayavani |

ಸದ್ಯ ಕನ್ನಡ ಚಿತ್ರರಂಗದಲ್ಲಿ ಚಂದನ್‌ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ಡೈವೋರ್ಸ್‌ ವಿಚಾರ ಜೋರಾಗಿ ಚರ್ಚೆಯಾಗುತ್ತಿದೆ. ಹಲವರು ಬೇರೆ ಬೇರೆ ರೀತಿ ವ್ಯಾಖ್ಯಾನ ಮಾಡುತ್ತಿದ್ದಾರೆ. ಈ ನಡುವೆಯೇ ಚಂದನ್‌ ಶೆಟ್ಟಿ ಮುಖ್ಯಭೂಮಿಕೆಯಲ್ಲಿ ನಟಿಸಿರುವ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದೆ. ಅದು “ವಿದ್ಯಾರ್ಥಿ ವಿದ್ಯಾರ್ಥಿನಿಯರೇ’.

Advertisement

ಹೀಗೊಂದು ಸಿನಿಮಾದಲ್ಲಿ ಚಂದನ್‌ ಶೆಟ್ಟಿ ನಟಿಸಿದ್ದು, ಈ ಚಿತ್ರ ಮುಂದಿನ ತಿಂಗಳು ತೆರೆಕಾಣಲಿದೆ. ಮೂಲಗಳ ಪ್ರಕಾರ ಚಿತ್ರವನ್ನು ಜುಲೈ 19ಕ್ಕೆ ತೆರೆಗೆ ತರಲು ಚಿತ್ರತಂಡ ತಯಾರಿ ನಡೆಸಿದೆ. ಈಗಾಗಲೇ ಹಾಡುಗಳನ್ನು ಬಿಡುಗಡೆ ಮಾಡಿರುವ ತಂಡ, ಈಗ ಚಿತ್ರದ ಸ್ಟೂಡೆಂಟ್‌ ಪಾರ್ಟಿ ಸಾಂಗ್‌ ಅನ್ನು ಜೂ.15ಕ್ಕೆ ಬಿಡುಗಡೆ ಮಾಡಲು ಮುಂದಾಗಿದೆ

ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಚಿತ್ರದಲ್ಲಿ ಚಂದನ್‌ ಶೆಟ್ಟಿ ಅವರದ್ದು ಭಿನ್ನ ಶೇಡ್‌ಗಳನ್ನು ಹೊಂದಿರುವ ಪಾತ್ರವಂತೆ. ಅವರ ಪಾತ್ರಕ್ಕೆ ಮೂರು ಆಯಾಮಗಳಿವೆ. ಆ ಮೂರೂ ಪಾತ್ರಗಳಿಗಾಗಿ ಅವರು ತಿಂಗಳುಗಟ್ಟಲೆ ಶ್ರಮವಹಿಸಿ ತಯಾರಿ ನಡೆಸಿದ್ದಾರೆ. ಆ ಮೂರೂ ಶೇಡ್‌ಗಳು ಒಂದಕ್ಕೊಂದು ತದ್ವಿರುದ್ಧವಾಗಿವೆಯಂತೆ.

ಅರುಣ್‌ ಅಮುಕ್ತ ಈ ಚಿತ್ರದ ನಿರ್ದೇಶಕರು. ಚಿತ್ರದಲ್ಲಿ ಚಂದನ್‌ ಶೆಟ್ಟಿ, ಭಾವನಾ ಅಪ್ಪು, ಅಮರ್‌, ಮನಸ್ವಿ, ವಿವಾನ್‌, ಸುನಿಲ್‌ ಪುರಾಣಿಕ್‌, ಅರವಿಂದ ರಾಜ್‌, = ಮಾನಸಿ, ಭವ್ಯ, ಅರವಿಂದ ರಾವ್‌, ಸಿಂಚನಾ, ರಘು ರಾಮನಕೊಪ್ಪ, ಕಾಕ್ರೋಚ್‌ ಸುಧಿ ಮುಂತಾದವರು ನಟಿಸಿದ್ದಾರೆ.

ಅಂದಹಾಗೆ, ಇದೊಂದು ಟೀನೇಜ್‌ ಕಲ್ಟ್ ಸಿನಿಮಾ ಸುಬ್ರಮಣ್ಯ ಕುಕ್ಕೆ ಮತ್ತು ಶಿವಲಿಂಗೇಗೌಡ “ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next