Advertisement

ಕಂಕುಳಲ್ಲಿ ಕಂದನನ್ನು ಹೊತ್ತು ಕರ್ತವ್ಯ ನಿಭಾಯಿಸಿದ ಮಹಿಳಾ ಪೊಲೀಸ್  

03:07 PM Mar 07, 2021 | Team Udayavani |

ಚಂಡೀಗಡ : ಮಹಿಳಾ ಪೊಲೀಸ್ ಪೇದೆಯೋರ್ವಳು ತನ್ನ ಎಳೆಗೂಸನ್ನು ಹೊತ್ತು ಕರ್ತವ್ಯ ನಿಭಾಯಿಸಿದ ಘಟನೆ ಚಂಡೀಗಡದಲ್ಲಿ ನಡೆದಿದ್ದು, ಅವರ ಕರ್ತವ್ಯ ನಿಷ್ಠೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

Advertisement

ಪ್ರಿಯಾಂಕಾ ಹೆಸರಿನ ಪೇದೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಜನಮೆಚ್ಚುಗೆ ಪಡೆಯುತ್ತಿದ್ದಾರೆ. ಟ್ರಾಫಿಕ್ ಪೊಲೀಸ್ ಆಗಿರುವ ಪ್ರಿಯಾಂಕಾ ಶುಕ್ರವಾರ ತನ್ನ ಪುಟ್ಟ ಕಂದನನ್ನು ಹೊತ್ತು, ಸುಡುವ ಬಿಸಿಲಿನಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ವಾಹನ ಸವಾರನೋರ್ವ ಈ ವಿಡಿಯೋ ಚಿತ್ರೀಕರಿಸಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾನೆ.

ಪ್ರಿಯಾಂಕಾ ಅವರ ಕರ್ತವ್ಯ ನಿಷ್ಠೆ, ಪ್ರಾಮಾಣಿಕತೆ ಹಾಗೂ ಶ್ರದ್ಧೆಗೆ ಎಲ್ಲರಿಂದಲೂ ಮೆಚ್ಚುಗೆಯ ಮಹಾಪೂರ ಹರಿದು ಬರುತ್ತಿದೆ. ಸಾಕಷ್ಟು ಜನರು ಟ್ವಿಟರ್ ಹಾಗೂ ಫೇಸ್‍ಬುಕ್‍ಗಳಲ್ಲಿ ಈ ವಿಡಿಯೋ ಹಂಚಿಕೊಳ್ಳುತ್ತಿದ್ದಾರೆ. ಇದರೊಂದಿಗೆ ಪ್ರಿಯಾಂಕಾ ಅವರ ಮೇಲೆ ಕನಿಕರ ತೋರದ ಹಿರಿಯ ಅಧಿಕಾರಿಗಳ ವಿರುದ್ಧವೂ ನೆಟ್ಟಿಜನ್ ಆಕ್ರೋಶ ಹೊರಹಾಕಿದ್ದಾರೆ.

ಇನ್ನು ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಪ್ರಿಯಾಂಕಾ ಅವರಿಗೆ ಕರ್ತವ್ಯಕ್ಕೆ ಹಾಜರಾಗುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿತ್ತು. ಆದರೆ, ಅವರು ಮಗು ಜತೆ 11 ಗಂಟೆಗೆ ಡ್ಯೂಟಿ ರಿಪೋರ್ಟ್ ಮಾಡಿಕೊಂಡಿದ್ದರು. ಮಗುವನ್ನು ಕರೆದುಕೊಂಡು ಬಂದಿದ್ದ ವಿಚಾರವಾಗಿ ಮೇಲಾಧಿಕಾರಿಗಳ ಜತೆಗೆ ವಾಗ್ವಾದ ನಡೆಸಿ, ಕರ್ತವ್ಯಕ್ಕೆ ಹಾಜರಾದರು ಎಂದು ಪೊಲೀಸ್ ಅಧಿಕಾರಿಯೋರ್ವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next