Advertisement

Skill development scam case: ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜಾಮೀನು

09:23 PM Nov 20, 2023 | Team Udayavani |

ಹೈದರಾಬಾದ್‌: ಕೌಶಲ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಟಿಡಿಪಿ ಮುಖ್ಯಸ್ಥ, ಮಾಜಿ ಸಿಎಂ ಎನ್‌. ಚಂದ್ರಬಾಬು ನಾಯ್ಡು ಅವರಿಗೆ ಆಂಧ್ರಪ್ರದೇಶ ಹೈಕೋರ್ಟ್‌ ಸೋಮವಾರ ಜಾಮೀನು ನೀಡಿದೆ.

Advertisement

ನಾಯ್ಡು ಅವರ ನಾಲ್ಕು ವಾರಗಳ ಅವಧಿಯ ಮಧ್ಯಂತರ ವೈದ್ಯಕೀಯ ಜಾಮೀನನ್ನು ನ್ಯಾಯಾಲಯವು ಸಾಮಾನ್ಯ ಜಾಮೀನಾಗಿ ಪರಿವರ್ತಿಸಿ, ಅದೇ ಆಧಾರದಲ್ಲಿ ಅವರನ್ನು ಬಿಡುಗಡೆಗೊಳಿಸಲು ಆದೇಶಿಸಿದೆ.

ಇದೇ ವೇಳೆ ಪ್ರಕರಣ ಸಂಬಂಧಿಸಿದಂತೆ ಯಾವುದೇ ಸಾರ್ವಜನಿಕ ಹೇಳಿಕೆ ನೀಡದಂತೆ ಮತ್ತು ಸಾರ್ವಜನಿಕ ರ‍್ಯಾಲಿ, ಸಭೆಗಳನ್ನು ಆಯೋಜಿಸುವುದು, ಭಾಗವಹಿಸುವುದು ಮಾಡದಂತೆ ವಿಧಿಸಿದ್ದ ಷರತ್ತು ನ.28ರವರೆಗೂ ಮುಂದುವರಿಯಲಿದೆ ಎಂದು ತಿಳಿಸಿದೆ.

 

Advertisement

Udayavani is now on Telegram. Click here to join our channel and stay updated with the latest news.

Next