Advertisement

Hospitalised: ಚಂದ್ರಬಾಬು ನಾಯ್ಡು ಅವರ ಸಹೋದರನ ಆರೋಗ್ಯ ಸ್ಥಿತಿ ಗಂಭೀರ, ಆಸ್ಪತ್ರೆಗೆ ದಾಖಲು

02:39 PM Nov 16, 2024 | Team Udayavani |

ಆಂಧ್ರಪ್ರದೇಶ: ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಕಿರಿಯ ಸಹೋದರ ಹಾಗೂ ಮಾಜಿ ಶಾಸಕ ನಾರಾ ರಾಮಮೂರ್ತಿ ನಾಯ್ಡು ಅವರ ಅರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಹೈದರಾಬಾದ್‌ನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.

Advertisement

ರಾಮಮೂರ್ತಿ ನಾಯ್ಡು ಅವರ ಅರೋಗ್ಯ ಸ್ಥಿತಿ ಚಿಂತಾಜನಕವಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಚಂದ್ರಬಾಬು ನಾಯ್ಡು ಹಾಗೂ ಪುತ್ರ ನಾರಾ ಲೋಕೇಶ್ ಹೈದರಾಬಾದ್‌ಗೆ ತೆರಳಿದ್ದಾರೆ.

ರಾಮಮೂರ್ತಿ ನಾಯ್ಡು ಅವರು 1994 ರ ಚುನಾವಣೆಯಲ್ಲಿ ತೆಲುಗು ದೇಶಂ ಪಕ್ಷ (ಟಿಡಿಪಿ) ನಲ್ಲಿ ಚಂದ್ರಗಿರಿ ಕ್ಷೇತ್ರದಲ್ಲಿ ಗೆದ್ದ ನಂತರ ಆಂಧ್ರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದರು. ಅವರು ನಟ ಮತ್ತು ಚಲನಚಿತ್ರ ನಿರ್ಮಾಪಕ ನಾರಾ ರೋಹಿತ್ ಅವರ ತಂದೆ, ನ್ಯೂಯಾರ್ಕ್ ಫಿಲ್ಮ್ ಅಕಾಡೆಮಿಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ.

ಇದನ್ನೂ ಓದಿ: Tragedy: ಓವರ್ ಟೇಕ್ ಮಾಡಲು ಹೋಗಿ ಭೀಕರ ಅಪಘಾತ… ನವ ವಧು-ವರ ಸೇರಿ 7 ಮಂದಿ ಮೃತ್ಯು

Advertisement

Udayavani is now on Telegram. Click here to join our channel and stay updated with the latest news.

Next