ಆಂಧ್ರ ಪ್ರದೇಶ: ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಆಂಧ್ರ ಪ್ರದೇಶದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸೀಕ್ವರಿಸುವ ಕಾರ್ಯಕ್ರಮದ ದಿನಾಂಕ ಮುಂದೂಡಿಕೆ ಆಗಿದೆ ಎಂದು ವರದಿಯಾಗಿದೆ.
ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ಅವರ ಟಿಡಿಪಿ ಪಕ್ಷ 175 ಸ್ಥಾನಗಳಲ್ಲಿ 135 ಸ್ಥಾನಗಳನ್ನು ಗೆದ್ದು, ಅಧಿಕಾರದ ಗದ್ದುಗೆಯನ್ನು ಹಿಡಿದಿದೆ. ಆ ಮೂಲಕ ಜಗನ್ ಮೋಹನ್ ಅವರ ವೈಎಸ್‌ಆರ್‌ಸಿಪಿ ಪಕ್ಷದ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ, ಮತ್ತೆ ಆಂಧ್ರ ಸಿಎಂ ಆಗಿ ಚುಕ್ಕಾಣಿ ಹಿಡಿಯಲಿದ್ದಾರೆ. ಟಿಡಿಪಿ, ಜನಸೇನಾ ಹಾಗೂ ಬಿಜೆಪಿ ಮೈತ್ರಿಯಾಗಿ ಒಟ್ಟು 164 ಸ್ಥಾನಗಳನ್ನು ಪಡೆದುಕೊಂಡಿದೆ.
ಇದೇ ಜೂನ್ 9 ರಂದು ಅಮರಾವತಿಯಲ್ಲಿ ಪ್ರಮಾಣವಚನ ಕಾರ್ಯಕ್ರಮ ನಿಗದಿಯಾಗಿತ್ತು. ಇದೀಗ ಪ್ರಮಾಣವಚನದ ಕಾರ್ಯಕ್ರಮ ಮುಂದೂಡಿಕೆ ಆಗಿದೆ ಎಂದು ವರದಿಯಾಗಿದೆ.
ಅದೇ ದಿನ ಪ್ರಧಾನಿಯಾಗಿ ಮೋದಿ ಮೂರನೇ ಬಾರಿ ಪ್ರಮಾಣ ವಚನ ಸೀಕ್ವರಿಸಲಿದ್ದು, ಈ ಕಾರಣದಿಂದ ನಾಯ್ಡು ಅವರ ಪ್ರಮಾಣ ವಚನ ಕಾರ್ಯಕ್ರಮ ಮುಂದೂಡಿಕೆ ಆಗಿದೆ ಎನ್ನಲಾಗಿದೆ.
ಜೂನ್ 12 ರಂದು ಅಮರಾವತಿಯಲ್ಲಿ ಆಂಧ್ರದ ನೂತನ ಸಿಎಂ ಆಗಿ ಚಂದ್ರಬಾಬು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಈ ಸಮಾರಂಭಕ್ಕೆ ನರೇಂದ್ರ ಮೋದಿ ಅವರು ಆಗಮಿಸಲಿದ್ದಾರೆ ಎಂದು ಮೂಲಗಳು ಹೇಳಿರುವುದಾಗಿ ವರದಿ ತಿಳಿಸಿದೆ.
ಎನ್ ಡಿಎ ಒಕ್ಕೂಟದಲ್ಲಿರುವ ಟಿಡಿಪಿ ಮೈತ್ರಿಗೆ ಸಂಪೂರ್ಣ ಬೆಂಬಲ ಘೋಷಿಸಿದೆ.