ರಾತ್ರಿ 7ಕ್ಕೆ ನಡೆಯುವ ಮಹಾಪೂಜೆಯನ್ನು ಸಂಜೆ 6.30ಕ್ಕೆ ನಡೆಸಲಾಗುತ್ತದೆ. 7 ಗಂಟೆಯ ಬಳಿಕ ಭಕ್ತರಿಗೆ ದೇವಸ್ಥಾನ ಪ್ರವೇಶಿಸಲು ಅವಕಾಶವಿಲ್ಲ. ಸಂಜೆಯ ಆಶ್ಲೇಷಾ ಬಲಿ ಸೇವೆ ಹಾಗೂ ರಾತ್ರಿಯ ಭೋಜನ ವ್ಯವಸ್ಥೆಯೂ ಇರುವುದಿಲ್ಲ. ಬೆಳಗ್ಗಿನಿಂದ ಮಧ್ಯಾಹದ ವರೆಗಿನ ಪೂಜಾ ಅವಧಿ ಮತ್ತು ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈ ಬದಲಾವಣೆಯನ್ನು ಅರಿತು ಭಕ್ತರು
ಸಹಕರಿಸ ಬೇಕು ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಕಟೀಲು
ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ರಾತ್ರಿಯ ಹೂವಿನ ಪೂಜೆ, ರಂಗಪೂಜೆ ಇತ್ಯಾದಿ ಯಾವುದೇ ವಿಶೇಷ ಸೇವೆಗಳು ಮತ್ತು ರಾತ್ರಿ ಅನ್ನದಾನ ಇರುವುದಿಲ್ಲ. ಮಹಾಪೂಜೆ ಎಂದಿನಂತೆ ರಾತ್ರಿ 8 ಗಂಟೆಗೇ ನಡೆಯಲಿದೆ.
ಕೊಲ್ಲೂರು
ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದಲ್ಲಿ ಗ್ರಹಣ ಕಾಲದಲ್ಲಿ ದೇವರಿಗೆ ಶತರುದ್ರಾಭಿಷೇಕ ನಡೆಯಲಿದೆ. ರಾತ್ರಿ ಮಹಾಪೂಜೆ ಎಂದಿನಂತೆ 9 ಗಂಟೆಗೆ ನಡೆಯಲಿದೆ.
ಭಕ್ತರಿಗೆ ಅನ್ನಪ್ರಸಾದದ ಬದಲು ಫಲಾಹಾರ ವಿತರಣೆ ನಡೆಯಲಿದೆ. ಗ್ರಹಣಕಾಲದಲ್ಲೂ ದೇವರದರ್ಶನಕ್ಕೆ ಅವಕಾಶವಿದೆ.
ಉಡುಪಿ ಶ್ರೀಕೃಷ್ಣ ಮಠ
ಉಡುಪಿ: ಮಂಗಳವಾರ ರಾತ್ರಿ 1.33ರಿಂದ ಮುಂಜಾವ 4.32ರ ವರೆಗೆ ನಡೆಯುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಉಡುಪಿ ಶ್ರೀಕೃಷ್ಣ ಮಠ, ಅನಂತೇಶ್ವರ ಹಾಗೂ ಚೌಂದ್ರಮೌಳೇಶ್ವರ ದೇವಸ್ಥಾನಗಳು ಆ ಹೊತ್ತಿನಲ್ಲಿಯೂ ತೆರೆದಿರಲಿವೆ. ಗ್ರಹಣದ ವೇಳೆ ಜಪ, ಸ್ತೋತ್ರ ಪಠಣ ಇತ್ಯಾದಿ ನಿರಂತರವಾಗಿ ನಡೆಯಲಿವೆ. ಭಕ್ತರು ದೇವರ ದರುಶನ ಪಡೆಯಬಹುದಾಗಿದೆ. ಗ್ರಹಣ ಮೋಕ್ಷದ ಬಳಿಕ ಅಭಿಷೇಕ, ಪೂಜೆ ನೆರವೇರಲಿದೆ.
ಧರ್ಮಸ್ಥಳದಲ್ಲಿ ಬದಲಾವಣೆ ಇಲ್ಲ
ಬೆಳ್ತಂಗಡಿ: ಚಂದ್ರಗ್ರಹಣ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳದ ಕಾರ್ಯಚಟುವಟಿಕೆಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಎಂದಿನಂತೆ ಪೂಜೆ ಮತ್ತು ದೇವರ ದರ್ಶನ ಇರುತ್ತದೆ. ಚಂದ್ರಗ್ರಹಣ ಮಧ್ಯರಾತ್ರಿ ಆಗುವುದರಿಂದ ರಾತ್ರಿ 9 ಗಂಟೆ ತನಕವೂ ಅನ್ನಛತ್ರದಲ್ಲಿ ಎಂದಿನಂತೆ ಅನ್ನ ದಾಸೋಹವಿರಲಿದೆ.
Advertisement
“ನೂರು ಪಟ್ಟು ಫಲ ಪ್ರಾಪ್ತಿ’ಗ್ರಹಣ ವೇಳೆ ದೇವರ ಧ್ಯಾನ, ಜಪ, ದೇವರ ದರುಶನ ಮಾಡಿದರೆ ಇದರಿಂದ ದೊರೆಯುವ ಫಲ ಬೇರೆ ದಿನಗಳಿಗಿಂತ ನೂರುಪಟ್ಟು ಅಧಿಕ. ಸಂಜೆ 6 ಗಂಟೆಯ ಅನಂತರ ಗ್ರಹಣ ಮೋಕ್ಷದವರೆಗೆ ಆಹಾರ ಸೇವಿಸದಿದ್ದರೆ ಉತ್ತಮ ಎಂದು ಉಡುಪಿ ಅನಂತೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಹರಿದಾಸ ಐತಾಳ ಅವರು ಪ್ರತಿಕ್ರಿಯಿಸಿದ್ದಾರೆ.