Advertisement

ಬಾಲಕಿಯರೊಂದಿಗೆ ಅಶ್ಲೀಲವಾಗಿ ವರ್ತಿಸಿ ಲೈಂಗಿಕ ಕ್ರಿಯೆಗೆ ಪ್ರಚೋದನೆ ನೀಡುತ್ತಿದ್ದವ ಜೈಲಿಗೆ

12:40 PM Apr 18, 2022 | Team Udayavani |

ಬೆಂಗಳೂರು: ಬಾಲಕಿಯರಿಗೆ ಲೈಂಗಿಕ ಕ್ರಿಯೆಗೆ ಪ್ರಚೋದಿಸಿದ ಅರ್ಚಕನಿಗೆ ಎಫ್‌ಟಿಎಸ್‌ಸಿ 1ನೇ ನ್ಯಾಯಾಲಯವು ಒಂದು ವರ್ಷ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ.

Advertisement

ಚಂದ್ರಾಲೇಔಟ್‌ ನಿವಾಸಿ ಸುಧೀಂದ್ರ ಅಪರಾಧಿ. ಕೆಲ ವರ್ಷಗಳ ಹಿಂದೆ ಸುಧೀಂದ್ರ ಆತನ ಮನೆ ಪಕ್ಕದಲ್ಲಿಯೇ ಇರುವ ಬಾಲಕಿಯರೊಂದಿಗೆ ಅಶ್ಲೀಲವಾಗಿ ವರ್ತಿಸಿ ಲೈಂಗಿಕ ಕ್ರಿಯೆಗೆ ಪ್ರಚೋದಿಸಿದ್ದ.

ಇದನ್ನೂ ಓದಿ: ಈಶ್ವರಪ್ಪ ರಾಜೀನಾಮೆಗೂ ಮುನ್ನ ಭಾರೀ ಪ್ರಮಾಣದ ಕಮಿಷನ್ ಅಕ್ರಮ ವ್ಯವಹಾರ: ಆಲಂ ಪಾಷಾ ಆರೋಪ

ಚಂದ್ರಾಲೇಔಟ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಸುಧೀಂದ್ರನ ವಿರುದ್ಧ ಎಫ್‌ಟಿಎಸ್‌ಸಿ 1ನೇ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖೀಸಿದ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಸುಧೀಂದ್ರನನ್ನು ಅಪರಾಧಿ ಎಂದು ಪರಿಗಣಿಸಿ ಶಿಕ್ಷೆ ವಿಧಿಸಿದೆ. ಜತೆಗೆ ನೊಂದ ಬಾಲಕಿಯರಿಗೆ ತಲಾ 10 ಸಾವಿರ ರೂ. ಪರಿಹಾರ ನೀಡುವಂತೆ ಆದೇಶಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next