Advertisement

ಚಂದ್ರಪ್ಪ ಗೆಲುವಿಗೆ ಆನೇಕಲ್ಲ ಹಾಕಿದ ನಾರಾಯಣಸ್ವಾಮಿ!

04:24 AM May 24, 2019 | Sriram |

ಚಿತ್ರದುರ್ಗ: ಐತಿಹಾಸಿಕ ಹಿನ್ನೆಲೆಯ ಚಿತ್ರದುರ್ಗ ಪರಿಶಿಷ್ಟ ಜಾತಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಹೊಸ ಇತಿಹಾಸ ಬರೆದಿದೆ. ಎಲ್ಲ ಲೆಕ್ಕಾಚಾರಗಳು ಬುಡಮೇಲಾಗಿದ್ದು,ಕಮಲ ಅರಳಿಸಲೇಬೇಕೆಂದು ಪಣ ತೊಟ್ಟಿದ್ದ ಬಿಜೆಪಿ ನಾಯಕರು ಕೊನೆಗೂ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್‌ನ ಭದ್ರಕೋಟೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿ ಮಾಜಿ ಸಂಸದ ಬಿ.ಎನ್‌. ಚಂದ್ರಪ್ಪ ಅವರನ್ನು ಸೋಲಿಸಿದ ಬಿಜೆಪಿ ಅಭ್ಯರ್ಥಿ ಆನೇಕಲ್‌ ನಾರಾಯಣಸ್ವಾಮಿ ಗೆಲುವಿನ ನಗೆ ಬೀರಿದ್ದಾರೆ.

Advertisement

ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಇಬ್ಬರೂ ಅಭ್ಯರ್ಥಿಗಳು ಹೊರಗಿನವರೇ ಆಗಿದ್ದು, ಪ್ರತಿ ಬಾರಿ ಹೊರಗಿನ ಅಭ್ಯರ್ಥಿಯನ್ನು ಗೆಲ್ಲಿಸುತ್ತಾ ಬಂದಿರುವ ಜಿಲ್ಲೆಯ ಮತದಾರರು ಈ ಬಾರಿಯೂ ಅದೇ ಪರಿಪಾಠ ಮುಂದುವರೆಸಿದ್ದಾರೆ. ಚುನಾವಣೆ ಘೋಷಣೆಯಾದ ನಂತರ ಮೈತ್ರಿ ಅಭ್ಯರ್ಥಿ ಒಂದು ಸುತ್ತು ಪ್ರಚಾರ ಮುಗಿಸಿದ್ದರೂ ಬಿಜೆಪಿ ಅಭ್ಯರ್ಥಿ ಘೋಷಿಸಿರಲಿಲ್ಲ. ಆದರೆ ಅಳೆದು ತೂಗಿ ಕೊನೇ ಕ್ಷಣದಲ್ಲಿ ನಾರಾಯಣ ಸ್ವಾಮಿ ಅವರನ್ನು
ಕಣಕ್ಕಿಳಿಸಲಾಗಿತ್ತು. ಇವರಿಗೆ ಟಿಕೆಟ್‌ ನೀಡಿದ್ದಕ್ಕೆ ವಿರೋಧವೂ ವ್ಯಕ್ತವಾಗಿತ್ತು.


ಭೋವಿ ಸಮುದಾಯಕ್ಕೆ ಟಿಕೆಟ್‌ ನೀಡದೆ ವಂಚಿಸಲಾಗಿದೆ ಎಂದು ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ನೇರವಾಗಿಯೇ ಅಸಮಾಧಾನ ಹೊರಹಾಕಿದ್ದರು. ಇವೆಲ್ಲ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದೇ ಹೇಳಲಾಗಿತ್ತು. ಆದರೆ ಇವೆಲ್ಲವನ್ನೂ ಮೀರಿ ಬಿಜೆಪಿ ಕ್ಷೇತ್ರದಲ್ಲಿ ಮತ್ತೂಮ್ಮೆ ಪಾರಮ್ಯ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಕ್ಷೇತ್ರದಲ್ಲಿರುವ ಇಬ್ಬರೂ ಅಭ್ಯರ್ಥಿಗಳು ಮಾದಿಗ ಸಮುದಾಯಕ್ಕೆ ಸೇರಿದವರಾಗಿದ್ದು, ಈ ಮತಗಳು ವಿಭಜನೆಯಾಗಿದ್ದು ಮತ್ತು ಕ್ಷೇತ್ರದಲ್ಲಿ ಬಿಜೆಪಿ ಶಾಸಕರು ಸೇರಿ ಕಾರ್ಯಕರ್ತರ ಒಗ್ಗಟ್ಟಿನ ಕೆಲಸದಿಂದ ಬಿಜೆಪಿಗೆ
ಲಾಭವಾಗಿದೆ. ಮೈತ್ರಿ ಪಕ್ಷಗಳ ಲೆಕ್ಕಾಚಾರ, ತಂತ್ರ ಎಲ್ಲವೂ ಸಹ ಮೋದಿ ಅಲೆಯಲ್ಲಿ ಕೊಚ್ಚಿ ಹೋಗಿದ್ದು ಎಐಸಿಸಿ ಅಧ್ಯಕ್ಷ ರಾಹುಲ್‌ ಪ್ರಚಾರವೂ ಫಲ ಕೊಟ್ಟಿಲ್ಲ. ಕಳೆದ ಬಾರಿ ಕಾಂಗ್ರೆಸ್‌ ನಿಂದ ಸ್ಪರ್ಧಿಸಿ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದ ಬಿ.ಎನ್‌.ಚಂದ್ರಪ್ಪ, ಈ ಚುನಾವಣೆಯಲ್ಲಿ ನಾರಾಯಣಸ್ವಾಮಿ ವಿರುದ್ಧ 80,067 ಮತಗಳ ಅಂತರದಿಂದ ಸೋಲು ಕಂಡಿದ್ದಾರೆ. ನಾರಾಯಣಸ್ವಾಮಿ 6,26,015 ಮತಗಳನ್ನು ಪಡೆದರೆ, ಮೈತ್ರಿಕೂಟದ ಅಭ್ಯರ್ಥಿ ಬಿ.ಎನ್‌. ಚಂದ್ರಪ್ಪ 5,45,948 ಮತಗಳಿಗೆ ತೃಪ್ತಿಪಡಬೇಕಾಯಿತು.

ನನ್ನ ಮೇಲೆ ವಿಶ್ವಾಸವಿಟ್ಟು ಜಿಲ್ಲೆಯ ಜನತೆ ಆಶೀರ್ವಾದ ಮಾಡಿದ್ದಾರೆ. ಮತದಾರರ ನಿರೀಕ್ಷೆ ಹುಸಿಗೊಳಿಸುವುದಿಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಲಿದ್ದು, ಬರಪೀಡಿತ ಪ್ರದೇಶದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ.
– ಎ.ನಾರಾಯಣಸ್ವಾಮಿ, ನೂತನ ಸಂಸದ

ಮತದಾರರ ತೀರ್ಮಾನಕ್ಕೆ ತಲೆಬಾಗುತ್ತೇನೆ. ಶುದಟಛಿ ಹಸ್ತನಾಗಿ ನಿಸ್ವಾರ್ಥತೆಯಿಂದ ಜನಸೇವೆ ಮಾಡಿದ್ದೇನೆ. ಇದನ್ನು ನಮ್ಮ ವಿರೋಧಿಗಳೂ ಒಪ್ಪಿಕೊಂಡಿದ್ದರು. ಮೈತ್ರಿ ಮುಖಂಡರು ಉತ್ಸಾಹದಿಂದ ಕೆಲಸ ಮಾಡಿದ್ದರು. ಇಂತಹ ಫಲಿತಾಂಶ ನಿರೀಕ್ಷಿಸಿರಲಿಲ್ಲ. ಫಲಿತಾಂಶ ಬೇಸರ ಮೂಡಿಸಿದೆ.
– ಬಿ.ಎನ್‌. ಚಂದ್ರಪ್ಪ ಪರಾಜಿತ ಅಭ್ಯರ್ಥಿ

Advertisement

ಗೆಲುವಿಗೆ 3ಕಾರಣ
1. ಮೋದಿ ಅಲೆ, ಸರ್ಜಿಕಲ್‌ ದಾಳಿ, ದಲಿತ ಅಸ್ಪÅಶ್ಯ ಎಡಗೈ ಅಭ್ಯರ್ಥಿಗೆ ಬಿಜೆಪಿ ಟಿಕೆಟ್‌ ನೀಡಿದ್ದು.
2. ಕ್ಷೇತ್ರ ವ್ಯಾಪ್ತಿಯಲ್ಲಿ ಐವರು ಬಿಜೆಪಿ ಶಾಸಕರು ಇದ್ದಿದ್ದು.
3. ಕಾರ್ಯಕರ್ತರ ಪ್ರಚಾರ ಬಲ ಯುವ ಮತದಾರರು ಜಾತಿ,ಮತ, ಧರ್ಮ ಭೇದವಿಲ್ಲದೆ ಬಿಜೆಪಿಗೆ ಮತ ಚಲಾಯಿಸಿದ್ದು

ಸೋಲಿಗೆ 3 ಕಾರಣ
1. ಮಾದಿಗ ಸಮುದಾಯದವರಿಗೆ ಬಿಜೆಪಿ ಟಿಕೆಟ್‌ ನೀಡಿದ್ದು.
2. ಮೋದಿ ವಿಜಯ ಸಂಕಲ್ಪ ಯಾತ್ರೆ ಶಿರಾ, ಪಾವಗಡ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಹೆಚ್ಚಿನ ಲಾಭ ಆಗುತ್ತದೆ ಎಂಬ ನಂಬಿಕೆ ಹುಸಿ.
3.ಮಾಜಿ ಶಾಸಕರ ಮೇಲೆ ಹೆಚ್ಚು ಅವಲಂಬಿತವಾಗಿದ್ದರಿಂದ ಇತರೆಡೆ ಗಮನವನ್ನೇ ಹರಿಸಲಿಲ್ಲ

Advertisement

Udayavani is now on Telegram. Click here to join our channel and stay updated with the latest news.

Next