ಚಿಕ್ಕಮಗಳೂರು: ಐದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರ ಸಹೋದರನ ಮಗ ಚಂದ್ರಶೇಖರ್ ಅವರ ಮೃತದೇಹ ಗುರುವಾರ ತುಂಗಾ ಮೇಲ್ದಂಡೆ ನಾಲೆಯಲ್ಲಿ ಪತ್ತೆಯಾಗಿದೆ. ಇದು ಅಪಘಾತವೋ ಅಥವಾ ಕೊಲೆಯೋ ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದೀಗ ಚಂದ್ರಶೇಖರ್ ಅವರು ನಾಪತ್ತೆ ಆಗುವ ಮೊದಲು ವಿನಯ್ ಗುರೂಜಿ ಅವರ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಗೌರಿಗದ್ದೆ ಆಶ್ರಮಕ್ಕೆ ಆಗಮಿಸಿದ್ದರು ಎಂಬ ವಿಚಾರ ಬೆಳಕಿಗೆ ಬಂದಿದೆ.
ತನ್ನ ಸ್ನೇಹಿತ ಕಿರಣ್ ನೊಂದಿಗೆ ಚಂದ್ರಶೇಖರ್ ಆಶ್ರಮಕ್ಕೆ ಆಗಮಿಸಿದ್ದು, ವಿನಯ್ ಗುರೂಜಿಯೊಂದಿಗೆ ಕೆಲಕಾಲ ಮಾತುಕತೆ ನಡೆಸಿ, ಆರ್ಶೀವಾದ ಪಡೆದು ಅ.30ರಂದು ರಾತ್ರಿ 9.45 ಕ್ಕೆ ಆಶ್ರಮದಿಂದ ತೆರಳಿದ್ದಾರೆ. ರಾತ್ರಿ 10 ಗಂಟೆಗೆ ಕೊಪ್ಪ ಬಸ್ ನಿಲ್ದಾಣದಿಂದ ಕಾರಿನಲ್ಲಿ ವಾಪಸ್ಸಾಗಿರುವ ಸಿಸಿಟಿವಿ ದೃಶ್ಯವೂ ಲಭ್ಯವಾಗಿದೆ.
ಇದನ್ನೂ ಓದಿ:ವಾಯು ಮಾಲಿನ್ಯ ಕೇವಲ ದೆಹಲಿಯಲ್ಲಿ ಮಾತ್ರವಲ್ಲ…ಕೇಂದ್ರದ ನೆರವು ಯಾಚಿಸಿದ ಸಿಎಂ ಕೇಜ್ರಿವಾಲ್
Related Articles
ವಿನಯ್ ಗುರೂಜಿಯಿಂದ ಚಂದ್ರಶೇಖರ್ ‘ಜಾಗೃತೆ’ ಎನ್ನುವ ಆರ್ಶೀವಾದ ಪಡೆದಿದ್ದ ಎನ್ನಲಾಗಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿದ ಆಶ್ರಮದ ಸಿಬ್ಬಂದಿ ಸುಧಾಕರ್, ಆಶ್ರಮಕ್ಕೆ ನಿತ್ಯ ಸಾವಿರಾರು ಜನ ಬರುತ್ತಾರೆ. ನಾವು ಯಾರನ್ನೂ ವಿಐಪಿ ಎಂದು ಪರಿಗಣಿಸಲ್ಲ. ಚಂದ್ರು ಕೂಡ ಕಿರಣ್ ಜೊತೆ ಬಂದಿದ್ದರು, ಬರುತ್ತಿದ್ದರು. ಅವರ ಸರಳತೆ ನೋಡಿ ಇಂದು ನಮಗೆ ತುಂಬಾ ಬೇಜಾರಾಗಿದೆ. ನಿನ್ನೆಯಿಂದ ಗುರುಗಳು ತುಂಬಾ ಬೇಜಾರಾಗಿದ್ದಾರೆ. ಆಶ್ರಮದಲ್ಲಿ ಚಂದ್ರು ಊಟ ಬಡಿಸುತ್ತಿದ್ದ, ತೆಂಗಿನಕಾಯಿ ಸುಲಿಯುತ್ತಿದ್ದ. ಇಂದು ಚಂದ್ರು ಸಾವು ನಮಗೆ ತುಂಬಾ ನೋವು ತಂದಿದೆ ಎಂದಿದ್ದಾರೆ.