ಮುಂಬಯಿ: ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ 2018-2021ನೇ ಸಾಲಿಗೆ ನೂತನ ಅಧ್ಯಕ್ಷರಾಗಿ ಚಂದ್ರಶೇಖರ ಎಸ್. ಪೂಜಾರಿ ಅವರು ಆಯ್ಕೆಯಾಗಿದ್ದಾರೆ. ಜು. 16ರಂದು ಸಂಜೆ ಸಂಜೆ ಸಾಂತಾಕ್ರೂಜ್ ಪೂರ್ವದ ಬಿಲ್ಲವರ ಭವನದ ಸಮಾಲೋಚನಾ ಸಭಾಗೃಹದಲ್ಲಿ ಅಸೋಸಿಯೇಶನ್‌ನ ಮಾಜಿ ಅಧ್ಯಕ್ಷ, ರಾಷ್ಟ್ರೀಯ ಬಿಲ್ಲವರ ಮಹಾ ಮಂಡಲದ ಅಧ್ಯಕ್ಷ ಜಯ ಸಿ. ಸುವರ್ಣರ ಮಾರ್ಗದರ್ಶನದಲ್ಲಿ ಮತ್ತು ಅಸೋಸಿಯೇಶನ್‌ನ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಕಾರ್ಯಕಾರಿ ಸಮಿತಿಯ ಪ್ರಥಮ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ ಜಯಂತಿ ವಿ. ಉಳ್ಳಾಲ್ ಹಾಗೂ ಯುವಾಭ್ಯುದಯ ಉಪ ಸಮಿತಿಯ ಕಾರ್ಯಾಧ್ಯಕ್ಷರಾಗಿ ನಾಗೇಶ್ ಎಂ. ಕೋಟ್ಯಾನ್ ಅವರನಉನ ಸರ್ವಾನುಮತದಿಂದ ನೇಮಿಸಲಾಯಿತು.
ಅಸೋಸಿಯೇಶನ್‌ನ ಉಪಾಧ್ಯಕ್ಷರುಗಳಾಗಿ ಶಂಕರ ಡಿ. ಪೂಜಾರಿ, ಹರೀಶ್ ಜಿ. ಅಮೀನ್, ದಯಾನಂದ್ ಆರ್. ಪೂಜಾರಿ ಕಲ್ವಾ, ಶ್ರೀನಿವಾಸ ಆರ್. ಕರ್ಕೇರ, ಗೌರವ ಪ್ರಧಾನ ಕಾರ್ಯದರ್ಶಿಯಾಗಿ ಧನಂಜಯ ಎಸ್. ಕೋಟ್ಯಾನ್, ಗೌರವ ಪ್ರಧಾನ ಕೋಶಾಧಿಕಾರಿ ರಾಜೇಶ್ ಜೆ. ಬಂಗೇರ, ಗೌರವ ಜೊತೆ ಕಾರ್ಯದರ್ಶಿಗಳಾಗಿ ಹರೀಶ್ ಜಿ. ಸಾಲ್ಯಾನ್, ಹರೀಶ್ ಹೆಜ್ಮಾಡಿ, ಕೇಶವ ಕೆ. ಕೋಟ್ಯಾನ್, ಧರ್ಮೇಶ್ ಎಸ್. ಸಾಲ್ಯಾನ್, ಜೊತೆ ಕೋಶಾಧಿಕಾರಿಗಳಾಗಿ ಶಿವರಾಮ ಕೆ. ಸಾಲ್ಯಾನ್, ಜಯ ಎಸ್.ಸುವರ್ಣ, ಮೋಹನ್ ಡಿ. ಪೂಜಾರಿ, ಬಬಿತಾ ಜೆ. ಕೋಟ್ಯಾನ್, ಮಹಿಳಾ ವಿಭಾಗದ ಕಾರ್ಯದರ್ಶಿಯಾಗಿ ಸುಮಿತ್ರಾ ಎಸ್.ಬಂಗೇರ, ಯುವಾಭ್ಯುದಯ ಸಮಿತಿ ಕಾರ್ಯದರ್ಶಿಯಾಗಿ ಉಮೇಶ್ ಎಂ. ಕೋಟ್ಯಾನ್, ಸೇವಾದಳದ ದಳಪತಿಯಾಗಿ ಗೋಪಾಲ ಎಸ್. ಕೋಟ್ಯಾನ್ ಅವರು ಆಯ್ಕೆಯಾದರು.
ಶಾಲಾ ಸಮಿತಿಯ ಕಾರ್ಯಾಧ್ಯಕ್ಷರಾಗಿ ಬನ್ನಂಜೆ ರವೀಂದ್ರ ಅಮೀನ್, ಕಾರ್ಯದರ್ಶಿಯಾಗಿ ಸಿ. ರಾಮಚಂದ್ರಯ್ಯ, ವಿದ್ಯಾ ಸಮಿತಿ ಕಾರ್ಯಾಧ್ಯಕ್ಷರಾಗಿ ವಿಶ್ವನಾಥ ಆರ್. ತೋನ್ಸೆ, ಕಾರ್ಯದರ್ಶಿಯಾಗಿ ಹರೀಶ್ ಜಿ. ಸಾಲ್ಯಾನ್, ಸಾಂಸ್ಕೃತಿಕ ಸಮಿತಿ ಕಾರ್ಯಾಧ್ಯಕ್ಷರಾಗಿ ದಯಾನಂದ್ ಆರ್. ಪೂಜಾರಿ, ಕಾರ್ಯದರ್ಶಿಯಾಗಿ ಅಶೋಕ್ ಕುಕ್ಯಾನ್ ಸಸಿಹಿತ್ಲು, ಇತರ ಹಿಂದುಳಿದ ವರ್ಗ (ಒಬಿಸಿ) ಸಮಿತಿಯ ಕಾರ್ಯಾಧ್ಯಕ್ಷರಾಗಿ ಎಂ. ಆನಂದ ಪೂಜಾರಿ, ಕಾರ್ಯದರ್ಶಿಯಾಗಿ ದಿನೇಶ್ ಬಿ. ಅಮೀನ್, ಸಾಮಾಜಿಕ ಮತ್ತು ಧಾರ್ಮಿಕ ಸಮಿತಿಯ ಕಾರ್ಯಧ್ಯಕ್ಷರಾಗಿ ಮೋಹನ್‌ದಾಸ್ ಜಿ. ಪೂಜಾರಿ, ಕಾರ್ಯದರ್ಶಿಯಾಗಿ ರವೀಂದ್ರ ಎ. ಅಮೀನ್, ಸಾಮಾನ್ಯ ಸಹಾಯಕ ಸಮಿತಿಯ ಕಾರ್ಯಾಧ್ಯಕ್ಷೆಯಾಗಿ ಶಕುಂತಳಾ ಕೆ. ಕೋಟ್ಯಾನ್, ಕಾರ್ಯದರ್ಶಿಯಾಗಿ ಸದಾಶಿವ ಎ. ಕರ್ಕೇರ, ಶುಭ ಮಂಗಳ ಸಮಿತಿಯ ಕಾರ್ಯಧ್ಯಕ್ಷೆಯಾಗಿ ಸುಮಿತ್ರಾ ಎಸ್. ಬಂಗೇರ, ಕಾರ್ಯದರ್ಶಿಯಾಗಿ ಬಬಿತಾ ಕೋಟ್ಯಾನ್ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರುಗಳಾಗಿ ಧರ್ಮಪಾಲ ಜಿ. ಅಂಚನ್, ಮಹೇಶ್ ಸಿ. ಪೂಜಾರಿ, ನಿಲೇಶ್ ಪೂಜಾರಿ, ಡಾ| ರಾಜಶೇಖರ್ ಆರ್. ಕೋಟ್ಯಾನ್, ಅಕ್ಷಯ್ ಎ. ಪೂಜಾರಿ ಆಯ್ಕೆ ಗೊಂಡರು.
ಇತ್ತೀಚೆಗೆ ನಡೆಸಲ್ಪಟ್ಟ ಅಸೋಸಿಯೇಶನ್‌ನ 86ನೇ ವಾರ್ಷಿಕ ಮಹಾಸಭೆಯಲ್ಲಿ ಮೂರು ವರ್ಷಗಳ ಕಾಲಾವಧಿಗೆ ಕಾರ್ಯಕಾರಿ ಸಮಿತಿಗೆ 30 ಸದಸ್ಯರು ಆಯ್ಕೆಗೊಂಡಿದ್ದು 5 ಸಹ ಸದಸ್ಯರುಗಳನ್ನು ನೇಮಿಸಲಾಯಿತು. ಮಾಜಿ ಅಧ್ಯಕ್ಷ ಎಲ್. ವಿ. ಅಮೀನ್, ಬಿಲ್ಲವ ಧುರೀಣರಾದ ಜ್ಯೋತಿ ಕೆ. ಸುವರ್ಣ, ಭಾಸ್ಕರ್ ಎಂ. ಸಾಲ್ಯಾನ್, ಗಂಗಾಧರ್ ಜೆ. ಪೂಜಾರಿ ಸಭೆಯಲ್ಲಿ ಉಪಸ್ಥಿತರಿದ್ದರು. ನಿರ್ಗಮನ ಅಧ್ಯಕ್ಷ ನಿತ್ಯಾನಂದ ಡಿ. ಕೋಟ್ಯಾನ್ ಅವರು ನೂತನ ಅಧ್ಯಕ್ಷ ಚಂದ್ರಶೇಖರ ಎಸ್. ಪೂಜಾರಿ ಅವರಿಗೆ ಪುಷ್ಪಗುತ್ಛವನ್ನಿತ್ತು ಅಧಿಕಾರ ಹಸ್ತಾಂತರಿಸಿ ಎಲ್ಲಾ ಪದಾಧಿಕಾರಿಗಳಿಗೆ ಶುಭಹಾರೈಸಿದರು. ಧರ್ಮಪಾಲ ಜಿ. ಅಂಚನ್ ವಂದಿಸಿದರು.
ಚಿತ್ರ-ವರದಿ : ರೋನ್ಸ್ ಬಂಟ್ವಾಳ್