ಹುಬ್ಬಳ್ಳಿ: ಚಂದ್ರಶೇಖರ ಗುರೂಜಿ ಅವರ ಅಂತ್ಯಕ್ರಿಯೆಗೆ ಇಲ್ಲಿ ಸುಳ್ಳ ರಸ್ತೆಯಲ್ಲಿರುವ ಅವರ ಜಮೀನಿನಲ್ಲಿ ಸಿದ್ದತೆ ಮಾಡಿಕೊಳ್ಳಲಾಗಿದ್ದು, ವೀರಶೈವ ಲಿಂಗಾಯತ ಸಂಪ್ರದಾಯದ ವಿಧಿ ವಿಧಾನಗಳ ಪ್ರಕಾರ ಅಂತ್ಯಕ್ರಿಯೆ ನಡೆಯಲಿದೆ.
ನಗರದ ಸುಳ್ಳ ರಸ್ತೆಯಲ್ಲಿರುವ ಶಿವಪ್ರಭು ಲೇಔಟ್ ನಲ್ಲಿರುವ ಗುರೂಜಿಗೆ ಸೇರಿದ ಹೊಲದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಅದಕ್ಕಾಗಿ, ನಗರದ ವಿವಿಧ ಭಾಗದ ಹನ್ನೊಂದು ಅರ್ಚಕರು ತಯಾರಿ ಮಾಡಿಕೊಳ್ಳುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ವಿಳಂಬವಾದ ಹಿನ್ನೆಲೆಯಲ್ಲಿ ಅಂತ್ಯಕ್ರಿಯೆ ನಡೆಯುವ ಸ್ಥಳದಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಇದನ್ನೂ ಓದಿ: ಚಂದ್ರಶೇಖರ್ ಗುರೂಜಿ ಹತ್ಯೆ: ವಿಚಾರಣೆಯಲ್ಲಿ ಹಂತಕರು ಹೇಳಿದ್ದೇನು!
ವೀರಶೈವ ಲಿಂಗಾಯತ ಸಂಪ್ರದಾಯದ ಪ್ರಕಾರ ಶವವನ್ನು ಕೂರಿಸಿ ಅಂತ್ಯಕ್ರಿಯೆ ಮಾಡಲಾಗುತ್ತದೆ. ಆದರೆ, ಗುರೂಜಿ ಅವರ ಮರಣೋತ್ತರ ಪರೀಕ್ಷೆ ಮಾಡಿ, ಶವವನ್ನು ಪ್ಲಾಸ್ಟಿಕ್ ನಿಂದ ಪ್ಯಾಕ್ ಮಾಡಿರುವುದರಿಂದ ಮಲಗಿಸಿ ಅಂತಿಮ ವಿಧಿವಿಧಾನ ನೆರವೇರಿಸಲಾಗುವುದು. ಎಂದು ಹುಬ್ಬಳ್ಳಿಯ ಮೂರುಸಾವಿರ ಮಠದ ಕೊಟ್ರೇಶ ಶಾಸ್ತ್ರಿ ಸುದ್ದಿಗಾರರಿಗೆ ತಿಳಿಸಿದರು.
Related Articles
ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ಪೂರ್ಣಗೊಂಡ ನಂತರ ಮೆರವಣಿಗೆ ಮಾರ್ಗ ನಿರ್ಧರಿಸಲಾಗುವುದು. ಗುರೂಜಿ ಅವರ ಸಹೋದರನ ಮಗ ಹಾಗೂ ಪೊಲೀಸರು ಚರ್ಚಿಸಿದ ನಂತರ ಮಾರ್ಗ ಗುರುತಿಸಲಾಗುವುದು.