Advertisement

84ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಡಾ ಕಂಬಾರ ಆಯ್ಕೆ

06:58 PM Sep 27, 2018 | Sharanya Alva |

ಗದಗ: ಧಾರವಾಡದಲ್ಲಿ ಡಿಸೆಂಬರ್ ತಿಂಗಳಿನಲ್ಲಿ ನಡೆಯಲಿರುವ 84ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ್ ಕಂಬಾರ ಅವರನ್ನು ಗುರುವಾರ ಆಯ್ಕೆ ಮಾಡಲಾಗಿದೆ.

Advertisement

ಗದಗದಲ್ಲಿ ನಡೆದ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕಂಬಾರರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನು ಬಳಿಗಾರ್ ಹೇಳಿದರು.

84ನೇ ಕನ್ನಡ ಸಾಹಿತ್ಯ ಸಮ್ಮೇಳನ ಸಾಂಸ್ಕೃತಿಕ ನಗರಿ ಧಾರವಾಡದಲ್ಲಿ ಡಿಸೆಂಬರ್ 7 ಮತ್ತು 8ರಂದು ನಡೆಯಲಿದೆ ಎಂದು ವಿವರಿಸಿದರು.

ಕಂಬಾರರ ಕಿರು ಪರಿಚಯ:

ಡಾ.ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರಾಗಿ, ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರಾಗಿ, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಕಂಬಾರರು ಕಾರ್ಯನಿರ್ವಹಿಸಿದ್ದರು.

Advertisement

1937ರ ಜನವರಿ 2ರಂದು ಬೆಳಗಾವಿ ಜಿಲ್ಲೆ ಘೋಡಿಗೇರಿ ಗ್ರಾಮದಲ್ಲಿ ಬಸವಣ್ಣೆಪ್ಪ ಕಂಬಾರ ಮತ್ತು ಚೆನ್ನಮ್ಮ ದಂಪತಿ ಪುತ್ರನಾಗಿ ಚಂದ್ರಶೇಖರ ಕಂಬಾರ ಜನಿಸಿದ್ದರು. ಗೋಕಾಕ್ ನ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದರು. ತದನಂತರ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಬಿಎ ಪದವಿ, 1962ರಲ್ಲಿ ಕರ್ನಾಟಕ ವಿವಿಯಿಂದ ಎಂಎ ಹಾಗೂ ಪಿಎಚ್ ಡಿ ಪದವಿ ಪಡೆದಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next