ನವದೆಹಲಿ: ಭಾರತದ ಮಹತ್ವಾಕಾಂಕ್ಷೆ ಯೋಜನೆ ಚಂದ್ರಯಾನ 3 ಮಹತ್ವದ ಘಟ್ಟಕ್ಕೆ ಬಂದು ತಲುಪಿದೆ. ಎರಡನೇ ಮತ್ತು ಅಂತಿಮ ಹಂತದ ಡೀಬೂಸ್ಟಿಂಗ್ ಪ್ರಕ್ರಿಯೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಇಸ್ರೋ ಹೇಳಿದೆ.
ವಿಕ್ರಮ್ ಲ್ಯಾಂಡರ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದು ಇಸ್ರೋ ತಿಳಿಸಿದೆ.
ವಿಕ್ರಮ್ ಲ್ಯಾಂಡರ್ ಚಂದ್ರನಿಗೆ ಅತ್ಯಂತ ಸಮೀಪವಿರುವ ಬಿಂದು 25 ಕಿಮೀ ಮತ್ತು ಚಂದ್ರನಿಂದ 134 ಕಿಮೀ ದೂರದ ಕಕ್ಷೆಯನ್ನು ತಲುಪಿದೆ. ಈ ಕಕ್ಷೆಯಿಂದಲೇ ದಕ್ಷಿಣ ಧ್ರುವ ಪ್ರದೇಶದಲ್ಲಿ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನಿಸುತ್ತದೆ ಎಂದು ಇಸ್ರೊ ಹೇಳಿದೆ.
ಬುಧವಾರ (ಆ.23) ಚಂದ್ರನ ಮೇಲ್ಮೈಯಲ್ಲಿ ಚಂದ್ರಯಾನ ಬಾಹ್ಯಾಕಾಶ ನೌಕೆಯು ಲ್ಯಾಂಡಿಂಗ್ ಆಗಲಿದ್ದು, ಅದಕ್ಕೂ ಮುನ್ನವೇ ನಿರ್ಣಾಯಕ ಹಂತವಾದ ಎರಡನೇ ಡೀಬೂಸ್ಟಿಂಗ್ ಅನ್ನು ಇಸ್ರೋ ವಿಜ್ಞಾನಿಗಳು ನಿಕಟವಾಗಿ ಮೇಲ್ವಿಚಾರಣೆ ಮಾಡಿದ್ದಾರೆ.
ಎರಡನೇ ಮತ್ತು ಅಂತಿಮ ಡೀಬೂಸ್ಟಿಂಗ್ ಕಾರ್ಯಾಚರಣೆಯು ಯಶಸ್ವಿಯಾಗಿ ಲ್ಯಾಂಡರ್ ಮಾಡ್ಯೂಲ್ ಕಕ್ಷೆಯನ್ನು 25 ಕಿಮೀ x 134 ಕಿಮೀಗೆ ಇಳಿಸಿದೆ. ಮಾಡ್ಯೂಲ್ ಆಂತರಿಕ ತಪಾಸಣೆಗೆ ಒಳಗಾಗುತ್ತದೆ ಮತ್ತು ಗೊತ್ತುಪಡಿಸಿದ ಲ್ಯಾಂಡಿಂಗ್ ಸೈಟ್‌ನಲ್ಲಿ ಸೂರ್ಯೋದಯಕ್ಕಾಗಿ ಕಾಯುತ್ತಿದೆ. ಆ. 23 ರಂದು ಲ್ಯಾಂಡಿಂಗ್ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಇಸ್ರೋ ಟ್ವಿಟರ್ ‘ಎಕ್ಷ್’ ನಲ್ಲಿ ತಿಳಿಸಿದೆ.