ಬೆಂಗಳೂರು : ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಂದ್ರು ಕೊಲೆ ಪ್ರಕರಣ ಸಂಬಂಧ ಮಾಜಿ ಐಪಿಎಸ್ ಅಧಿಕಾರಿ, ಆಪ್ ಮುಖಂಡ ಭಾಸ್ಕರ್ ರಾವ್ ಬಿಜೆಪಿ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು ಹಾಲಿ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪರ ಬ್ಯಾಟಿಂಗ್ ಮಾಡಿದ್ದಾರೆ. ”ಪೊಲೀಸ್ ಆಯುಕ್ತರು, ಬೆಂಗಳೂರು 15 ಮಿಲಿಯನ್ ನಾಗರಿಕರನ್ನು ರಕ್ಷಿಸುತ್ತಿದ್ದಾರೆ.. ಆಡಳಿತಾರೂಢ ರಾಜ್ಯ ಸರ್ಕಾರ ಮತ್ತು ಅಧಿಕಾರದಲ್ಲಿರುವ ಪಕ್ಷದ ರಾಜಕಾರಣಿಗಳು ಮಾಧ್ಯಮಗಳಲ್ಲಿ ಆಯುಕ್ತರನ್ನು “ಸುಳ್ಳುಗಾರ” ಎಂದು ಕರೆಯುವುದು ಮುಖ್ಯಮಂತ್ರಿ ಮತ್ತು ಸರಕಾರವನ್ನು ಅವಮಾನಿಸುತ್ತಿದೆ. ಆಶಾದಾಯಕವಾಗಿ ಉತ್ತಮ ಆಡಳಿತವು ಮೇಲುಗೈ ಸಾಧಿಸುತ್ತದೆ” ಎಂದು ಟೀಕಿಸಿದ್ದಾರೆ.
ಚಂದ್ರುಕೊಲೆ ವಿಚಾರದಲ್ಲಿ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂಥ್ ಸುಳ್ಳು ಹೇಳಿದ್ದಾರೆ ಎಂದು ಬಿಜೆಪಿ ನಾಯಕರಾದ ಸಿ.ಟಿ.ರವಿ ಹಾಗೂ ರವಿಕುಮಾರ್ ಮಾಡಿದ್ದ ಆರೋಪ ಹಿನ್ನೆಲೆಯಲ್ಲಿ ಭಾಸ್ಕರ್ ರಾವ್ ಈ ಟ್ವೀಟ್ ಮಾಡಿದ್ದಾರೆ.