Advertisement
ಶುಕ್ರವಾರ(ನ22) ನಡೆದ ಸಿದ್ಧಾರ್ಥ ಎಜುಕೇಷನ್ ಸೊಸೈಟಿಯ ಕ್ವೆಸ್ಟ್ ಶಿಕ್ಷಣ ಅಕಾಡೆಮಿಯ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಸಿಎಂ ”ಡಾಕ್ಟರ್, ಎಂಜಿನಿಯರಿಂಗ್ ಓದಿದ್ದರೂ ಮೌಢ್ಯ, ಕಂದಾಚಾರ ಬಿಡುವುದೇ ಇಲ್ಲ.ಇಂಥಾ ಶಿಕ್ಷಣ ಬೇಕಾ? ಬಸವಣ್ಣನವರು ಕರ್ಮ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ.ವೈಜ್ಞಾನಿಕತೆ, ವೈಚಾರಿಕತೆ ಇಲ್ಲದ ಶಿಕ್ಷಣದಿಂದ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳಲು ಸಾಧ್ಯವಿಲ್ಲ. ನಮ್ಮ ವಿಕಾಸ ಆಗಲು, ಸ್ವಾಭಿಮಾನಿಗಳಾಗಲು ಶಿಕ್ಷಣ ಅತ್ಯಗತ್ಯ. ಬಹಳ ಮಂದಿ ಶಿಕ್ಷಿಣ ಪಡೆದಿರುತ್ತಾರೆ, ಆದರೆ ಅವರಲ್ಲಿ ಸಾಮಾಜಿಕ ಸ್ಪಂದನೆ, ಮಾನವೀಯ ಸ್ಪಂದನೆ ಇರುವುದಿಲ್ಲ. ಶಿಕ್ಷಣ ಕಲಿತೂ ಜಾತಿವಾದಿಗಳಾದರೆ, ಮನುಷ್ಯ ತಾರತಮ್ಯ ಪಾಲಿಸೋದು ಮಾಡಿದ್ರೆ ಅಂಥಾ ಶಿಕ್ಷಣದಿಂದ ಏನು ಪ್ರಯೋಜನ?” ಎಂದು ಪ್ರಶ್ನಿಸಿದರು.
Related Articles
Advertisement
ಸಮಾರಂಭದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ತನ್ವೀರ್ ಸೇಠ್, ಕೃಷ್ಣಮೂರ್ತಿ, ಸಂಸ್ಥೆಯ ಮುಖ್ಯಸ್ಥೆ ಕನ್ನಿಕಾ ಪರಮೇಶ್ವರಿ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.