Advertisement

ಸ್ತ್ರೀ ಪ್ರವೇಶದಿಂದ ಬದಲಾವಣೆ ಸಾಧ್ಯ: ಸಂಸದ ಗದ್ದಿಗೌಡರ

06:16 PM Mar 15, 2023 | Team Udayavani |

ಬಾಗಲಕೋಟೆ: ಸರಕಾರ ಮಹಿಳೆಯರಿಗೂ ಸಹ ಸಮಾನ ಅವಕಾಶ ಕಲ್ಪಿಸಿದ್ದರಿಂದ ಇಂದು ಪ್ರತಿಯೊಂದ ಕ್ಷೇತ್ರದಲ್ಲಿಯೂ ಬದಲಾವಣೆ ನೋಡುತ್ತಿದ್ದೇವೆ ಎಂದು ಸಂಸದ ಪಿ.ಸಿ.ಗದ್ದಿಗೌಡರ ಹೇಳಿದರು.

Advertisement

ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋರಿಯಂ ಹಾಲ್‌ನಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸನಾತನ ಕಾಲದಿಂದಲೂ ಸ್ತ್ರೀಯರಿಗೆ ಗೌರವ ಕೊಡಲಾಗುತ್ತಿದ್ದು, ಭಾರತ ದೇಶದಲ್ಲಿ ಸ್ತ್ರೀಯರಿಗೆ ಪೂಜ್ಯ ಸ್ಥಾನವಿದೆ. ತಾಯಿಯಾಗಿ, ಸಹಯೋದರಿಯಾಗಿ, ಪತ್ನಿಯಾಗಿ ಕುಟುಂಬ ನಿರ್ವಹಿಸುವದರ ಜೊತೆಗೆ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಂಡಿದ್ದಾಳೆ. ಇದನ್ನು ಗಮನಿಸಿದಾಗ ಸ್ತ್ರೀ ಅಬಲೆಯಲ್ಲ ಸಬಲೆ ಎನ್ನುವ ಮಾತು ದಿಟವಾಗಿದೆ ಎಂದರು.

ಸರಕಾರ ಮಹಿಳೆಯರಿಗಾಗಿ ಅನೇಕ ಯೋಜನೆ ಜಾರಿಗೆ ತಂದಿದೆ. ಶಿಕ್ಷಣ ಪಡೆಯುವ ಮೂಲಕ ಎಲ್ಲ ಕ್ಷೇತ್ರಗಳಲ್ಲಿ ಕೆಲಸ ಮಾಡುವಂತಾಗಬೇಕು. ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖವಾಗಿದೆ ಎಂದು ತಿಳಿಸಿದರು. ಶಾಸಕ ಡಾ| ವೀರಣ್ಣ ಚರಂತಿಮಠ ಮಾತನಾಡಿ ಪ್ರತಿಯೊಂದು ಕ್ಷೇತ್ರಗಳಲ್ಲಿ ಮಹಿಳೆಯರು ಕೆಲಸ ಮಾಡುತ್ತಿರುವುದನ್ನು ನೋಡುತ್ತಿದ್ದೇವೆ.

ಪುರುಷರಿಗೆ ಸಮಾನದಾವ ಕೆಲಸ ಮಹಿಳೆಯೂ ಕೂಡಾ ಮಾಡುತ್ತಿದ್ದಾಳೆ ಎಂದರು. ಬುಡಾ ಅಧ್ಯಕ್ಷ ಬಸವಲಿಂಗಪ್ಪ ನಾವಲಗಿ, ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ಮಾತನಾಡಿದರು. ಜಿಪಂ ಸಿಇಒ ಟಿ.ಭೂಬಾಲನ್‌ ಮಾತನಾಡಿ, ಕಾನೂನಿನಡಿಯಲ್ಲಿ ಮಹಿಳೆಯರಿಗೆ ಸಮಾನತೆ ನೀಡಲಾಗಿದೆ. ಆ ಹಕ್ಕನ್ನು ಪಡೆದುಕೊಳ್ಳುತ್ತಿಲ್ಲ. ಗ್ರಾಮ ಪಂಚಾಯಿತಿ, ತಾ.ಪಂ. ಹಾಗೂ ಜಿ.ಪಂ. ಸ್ಥಾನಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಲಾಗಿದೆ. ಅಧಿಕಾರ ಮಾತ್ರ ಅನುಭವಿಸುತ್ತಿಲ್ಲ.

Advertisement

ಜಿಲ್ಲೆಯಲ್ಲಿ 195 ಗ್ರಾಮ ಪಂಚಾಯತಿ ಪೈಕಿ 40 ಗ್ರಾ.ಪಂಗಳಲ್ಲಿ ಕಸ ವಿಲೇವಾರಿ ವಾಹನಗಳಲ್ಲಿ ವಾಹನ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಅಷ್ಟೇ ಅಲ್ಲ ಬಸ್‌ ಹಾಗೂ ಮೆಟ್ರೋದಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ ಎಂದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅಕ್ಕಮಹಾದೇವಿ ಕೆ.ಎಚ್‌ ಪ್ರಾಸ್ತಾವಿಕವಾಗಿ ಮಾತನಾಡಿದರು. ರಂಗೋಲಿ ಮತ್ತು ಅಡುಗೆ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಶಸ್ತಿ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ
ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ನಂದಾ ಹಣಮರಟ್ಟಿ, ಡಿವೈಪಿಸಿ ಜಿಲ್ಲಾ ಉಪ ಸಮನ್ವಯಾಧಿಕಾರಿ ಜಾಸ್ಮಿàನ್‌ ಕಿಲ್ಲೇದಾರ, ಜಿಲ್ಲಾ ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಗುರಮ್ಮ ಸಂಕೀನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಮರೇಶ ಉಪಸ್ಥಿತರಿದ್ದರು.

ಉತ್ತಮ ಸ್ತ್ರೀಶಕ್ತಿ ಸಂಘಗಳಿಗೆ ಸತ್ಕಾರ
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಾದ ಶಿಲ್ಪಾ ಎರಾಶಿ, ಸುನಂದ ಪಾಟೀಲ, ಮಾಲಾ ಬಾವಲತ್ತಿ (ಸಮಾಜಿಕ ಕ್ಷೇತ್ರ), ಮಂಜುಳಾ ಕಾಳಪ್ಪ ಬುಳ್ಳ (ಸ್ವಯಂ ಉದ್ಯೋಗ), ಉತ್ತಮ ಸ್ತ್ರೀಶಕ್ತಿ ಸಂಘಗಳಾದ ಬಾಗಲಕೋಟೆಯ ಆಶಾದೀಪ ಸ್ತ್ರೀಶಕ್ತಿ ಸಂಘ, ಬಾದಾಮಿಯ ಶಾರದಾ ದೇವಿ ಸ್ತ್ರೀಶಕ್ತಿ ಸಂಘ, ಜಮಖಂಡಿಯ ದಾನೇಶ್ವರಿ ಸ್ತ್ರೀಶಕ್ತಿ ಸಂಘ, ಮುಧೋಳನ ಕಸ್ತೂರಿಬಾ ಸ್ತ್ರೀಶಕ್ತಿ ಸಂಘ, ಬೀಳಗಿಯ ಪಾಂಡುರಂಗ ಸ್ತ್ರೀಶಕ್ತಿ ಸಂಘ, ಹುನಗುಂದ ಬಸವೇಶ್ವರ ಸ್ತ್ರೀಶಕ್ತಿ ಸಂಘಗಳ ಮುಖ್ಯಸ್ಥರನ್ನು ಸನ್ಮಾನಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next