ಬೆಂಗಳೂರು: ಕೂಲಿ ಕಾರ್ಮಿಕರ ಮಕ್ಕಳು ಮತ್ತು ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ತಾವಿರುವ ಪ್ರದೇಶದ ಪರೀಕ್ಷಾ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲು ಅವಕಾಶವಿದೆ. ಆದರೆ, ಕೊರೊನಾ ಭೀತಿಯಿಂದ ಮಹಾನಗರ, ನಗರ ಪ್ರದೇಶದಿಂದ ಗ್ರಾಮೀಣ ಪ್ರದೇಶಕ್ಕೆ ಹೋಗಿರುವ ಸಾಮಾನ್ಯ ಉದ್ಯೋಗಸ್ಥರ ಮಕ್ಕಳು ಸೇರಿ ಬೇರೆ ವಿದ್ಯಾರ್ಥಿಗಳಿಗೆ ಈ ಸೌಲಭ್ಯವಿಲ್ಲ.
ಅನೇಕ ವಿದ್ಯಾರ್ಥಿಗಳಿಗೆ ಹಾಗೂ ಪಾಲಕ, ಪೋಷಕರಿಗೆ ಈ ವಿಚಾರವಾಗಿ ಸ್ವಲ್ಪ ಗೊಂದಲ ವಿತ್ತು. ಈಗ ಎಸ್ಸೆಸ್ಸೆಲ್ಸಿ ಪರೀಕ್ಷಾ ಮಂಡಳಿ ಅದನ್ನು ಸ್ಪಷ್ಟಪಡಿಸಿದೆ. ವಲಸೆ ಕಾರ್ಮಿಕರ ಮಕ್ಕಳು ಮತ್ತು ವಸತಿ ಶಾಲೆಯ ಮಕ್ಕಳು ಹೊರತುಪಡಿಸಿ ಬೇರೆ ಯಾವುದೇ ಮಕ್ಕಳಿಗೂ ಈ ಸೌಲಭ್ಯವಿಲ್ಲ ಎಂದು ಮಂಡಳಿ ತಿಳಿಸಿದೆ. ಈ ಸಂಬಂಧ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಶಾಲೆಗಳ ಮುಖ್ಯಶಿಕ್ಷಕರಿಗೆ ನಿರ್ದೇಶನವನ್ನು ನೀಡಲಾಗಿದೆ.
ರಾಜ್ಯದ ಎಲ್ಲ ಸರ್ಕಾರಿ ಪ್ರೌಢಶಾಲೆಗಳ ವಿದ್ಯಾರ್ಥಿಗಳ ಮಾಹಿತಿ ಆಯಾ ಶಾಲೆಯ ಮುಖ್ಯಶಿಕ್ಷಕರು ಹಾಗೂ ಶಿಕ್ಷಕರ ಬಳಿಯಿದೆ. ಕೂಲಿ ಕಾರ್ಮಿಕರ ಮಕ್ಕಳು ಯಾರು ಎಂಬುದು ಸ್ಥಳೀಯವಾಗಿ ಶಿಕ್ಷಕರು ಮತ್ತು ಮುಖ್ಯಶಿಕ್ಷಕರು ಈಗಾಗಲೇ ಮಾಹಿತಿ ಹೊಂದಿರುತ್ತಾರೆ. ಹಾಗೆಯೇ ವಸತಿ ಶಾಲೆಗಳ ಮಕ್ಕಳು ಯಾರು ಎಂಬ ಸ್ಪಷ್ಟತೆ ಇರುತ್ತದೆ, ಈ ಎರಡು ವಿಭಾಗ ಹೊರತುಪಡಿಸಿ, ಬೇರೆ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಇರುವುದಿಲ್ಲ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ.ಸುಮಂಗಳಾ ಅವರು ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಎಲ್ಲ ರೀತಿಯ ಸಿದಟಛಿತೆ ಮಾಡಿಕೊಳ್ಳುತ್ತಿದ್ದೇವೆ. ಪರೀಕ್ಷಾ ಕೇಂದ್ರ ಬದಲಿಸುವ ವಿದ್ಯಾರ್ಥಿಗಳ ಸಂಬಂಧ ಈಗಾಗಲೇ ವಿಸ್ತೃತವಾದ ಸುತ್ತೋಲೆಯನ್ನು ಹೊರಡಿಸಲಾಗಿದೆ. ವಲಸೆ ಕಾರ್ಮಿಕರು ಕುಟುಂಬ ಸಮೇತರಾಗಿ ವಲಸೆ ಹೋಗುತ್ತಾರೆ. ಹೀಗಾಗಿ ಅವರಿರುವ ಕಡೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ. ವಸತಿ ಶಾಲೆಗಳಲ್ಲಿ ಕ್ವಾರಂಟೈನ್ ಇರುವುದರಿಂದ ಪರೀಕ್ಷೆ ನಡೆಸುವುದು ಕಷ್ಟ ಮತ್ತು ಅಲ್ಲಿಗೆ ಮಕ್ಕಳು ಸದ್ಯ ಹೋಗಲು ಸಾಧ್ಯವಿಲ್ಲ. ಹೀಗಾಗಿ ಇಂತಹ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗಾಗಿ ಈ ವ್ಯವಸ್ಥೆ ಕಲ್ಪಿಸಲಾಗಿದೆ.
ಉಳಿ ದಂತೆ ಬಸ್ ವ್ಯವಸ್ಥೆ ಹಾಗೂ ಜಿಲ್ಲೆಗಳ ನಡುವಿನ ಸಂಚಾರಕ್ಕೆ ಪಾಸ್ ಅಗತ್ಯವಿಲ್ಲದೇ ಇರುವುದ ರಿಂದ ಬೇರೆ ಮಕ್ಕಳಿಗೆ ಇದರಿಂದ ಸಮಸ್ಯೆ ಆಗುವ ಸಾಧ್ಯತೆ ಕಡಿಮೆ ಎಂದು ವಿವರಿಸಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಎಲ್ಲ ಸಿದತೆ ಮಾಡಿಕೊಂಡಿದ್ದೇವೆ. ಮಾಸ್ಕ್ ವಿತರಣೆ ಯನ್ನು ಸ್ಕೌಟ್ ಮತ್ತು ಗೈಡ್ಸ್‌ನಿಂದ ನಡೆಯ ಲಿದೆ. ಸ್ಕೌಟ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಸ್ವಯಂಸೇವಕರಾಗಿ ಸೇವೆ ಸಲ್ಲಿಸಲಿದ್ದಾರೆ. ಒಂದು ಕೊಠಡಿಯಲ್ಲಿ ಗರಿಷ್ಠ 18 ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ. ಹೆಚ್ಚುವರಿ ಪರೀಕ್ಷಾ ಕೊಠಡಿಗಳನ್ನು ಮೀಸಲಿಟ್ಟುಕೊಳ್ಳಲು ಸೂಚಿಸಿದ್ದೇವೆ ಎಂದು ಮಾಹಿತಿ ನೀಡಿದರು.