Advertisement
ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಜನತಾ ಪರ್ವ 1.O ಎರಡನೇ ಹಂತದ ಕಾರ್ಯಗಾರ ‘ಜನತಾ ಸಂಗಮ’ದ ಆರನೇ ದಿನ ನಡೆದ ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ ಜಿಲ್ಲೆಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಅವರು, ಪಕ್ಷ ಕಟ್ಟಲು ನೆಪಗಳು ಬೇಡ. ಬದ್ಧತೆಯಿಂದ ಪಕ್ಷವನ್ನು ಕಟ್ಟಿ ಬೆಳೆಸಿದರೆ ಅಂತಹವರನ್ನು ಪಕ್ಷ ಗುರುತಿಸುತ್ತದೆ ಎಂದು ಅವರು ನೇರವಾಗಿಯೇ ಹೇಳಿದರು.
Related Articles
Advertisement
ಅಲ್ಲದೆ, ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡಲಿರುವ ಅಭ್ಯರ್ಥಿಗಳ ಗೆಲುವಿಗಾಗಿ ಪ್ರತಿಯೊಬ್ಬ ಕಾರ್ಯಕರ್ತ, ಮುಖಂಡನೂ ಶ್ರದ್ಧೆ, ಬದ್ಧತೆಯಿಂದ ಕೆಲಸ ಮಾಡಬೇಕಾಗುತ್ತದೆ. ಈ ಮೂಲಕ 2023ಕ್ಕೆ ಸ್ವತಂತ್ರ ಸರಕಾರವನ್ನು ತರಲು ಎಲ್ಲರೂ ಶ್ರಮಿಸಬೇಕು ಎಂದು ಅವರು ಹೇಳಿದರು.
ತಳಮಟ್ಟದಿಂದ ಪಕ್ಷದ ಮೇಲ್ಮಟ್ಟದವರೆಗೂ ಒಗ್ಗಟ್ಟು ಎನ್ನುವುದು ಬಹಳ ಮುಖ್ಯ. ಪ್ರತಿ ಸಮಸ್ಯೆಯನ್ನು ಆಯಾ ಮಟ್ಟದಲ್ಲೇ ಬಗೆಹರಿಸಿಕೊಳ್ಳಬೇಕು. ಬಿಕ್ಕಟ್ಟು ದೊಡ್ಡದಾಗಲು ಬಿಡಬಾರದು ಎಂದು ಮುಖಂಡರಿಗೆ ಕುಮಾರಸ್ವಾಮಿ ಅವರು ತಾಕೀತು ಮಾಡಿದರು.
ಇದೇ ವೇಳೆ ಶಿವಮೊಗ್ಗ ಜಿಲ್ಲಾ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಅವರು ನೇಮಕವಾಗಿದ್ದು, ಅವರಿಗೆ ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ನೇಮಕಾತಿ ಆದೇಶ ನೀಡಿದರು.
ಚಿಕ್ಕಮಾಗಳೂರು, ಶಿವಮೊಗ್ಗ ಸಭೆಯಲ್ಲಿ ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಚಿಕ್ಕಮಗಳೂರು ಜಿಲ್ಲಾ ಜೆಡಿಎಸ್ ಅಧ್ಯಕ್ಷ ಅಜಿತ್ ರಂಜನ್, ಜಿಲ್ಲಾ ಮಾಜಿ ಅಧ್ಯಕ್ಷ ಶ್ರೀಕಾಂತ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಮುಖಂಡರಾದ ಜ್ವಾಲನಯ್ಯ, ವೆಂಕಟೇಶ್, ಕೆ.ಎಲ್.ರಾಮಕೃಷ್ಣ ಮುಂತಾದವರು ಪಾಲ್ಗೊಂಡಿದ್ದರು.
ಚಿತ್ರದುರ್ಗ ಮತ್ತು ತುಮಕೂರು ಸಭೆಯಲ್ಲಿ ಮಾಜಿ ಶಾಸಕರಾದ ವೀರಭದ್ರಯ್ಯ, ಎಂ. ಟಿ.ಕೃಷ್ಣಪ್ಪ, ಸುರೇಶ್ ಬಾಬು, ತಿಮ್ಮರಾಯಪ್ಪ, ಸುಧಾಕರ ಲಾಲ್, ವಿಧಾನ ಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ರಮೇಶ್ ಗೌಡ, ತುಮಕೂರು ಜಿಲ್ಲಾಧ್ಯಕ್ಷ ಅಂಜಿನಪ್ಪ, ಗುಬ್ಬಿಯ ಮುಖಂಡ ನಾಗರಾಜು ಮುಂತಾದವರು ಹಾಜರಿದ್ದರು.