Advertisement

Vijayanagara ಜಿಲ್ಲೆ: ಎರಡನೇ ಅವಧಿಗೂ ಮುಂದುವರೆದ ಚನ್ನಬಸವನಗೌಡ ಪಾಟೀಲ್

08:06 AM Jan 15, 2024 | Team Udayavani |

ಬಳ್ಳಾರಿ: ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಹಾಲಿ ಅಧ್ಯಕ್ಷ ಚನ್ನಬಸವನಗೌಡ ಪಾಟೀಲ್ ಅವರನ್ನೇ ಎರಡನೇ ಅವಧಿಗೂ ಮುಂದುವರೆಸಲಾಗಿದೆ.

Advertisement

ಅವಿಭಜಿತ ಬಳ್ಳಾರಿ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರಾಗಿದ್ದ ಚನ್ನಬಸವನಗೌಡ ಪಾಟೀಲ್ ಅವರು, ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆಯಾಗಿ ವಿಜಯನಗರ ನೂತನ ಜಿಲ್ಲೆಯಾಗಿ ರಚನೆಯಾದ ಬಳಿಕ ವಿಭಜಿತ ಬಳ್ಳಾರಿ ಜಿಲ್ಲಾಧ್ಯಕ್ಷ ಸ್ಥಾನವನ್ನು ತ್ಯಜಿಸಿ, ವಿಜಯನಗರ ಜಿಲ್ಲೆಯ ಜಿಲ್ಲಾಧ್ಯಕ್ಷರಾಗಿ ಮುಂದುವರೆದರು. ಇದೀಗ ಎರಡನೇ ಅವಧಿಗೂ ಅವರನ್ನೇ ಅಧ್ಯಕ್ಷರನ್ನಾಗಿ ಮುಂದುವರೆಸಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆದೇಶ ಹೊರಡಿಸಿದ್ದಾರೆ.

ಜಾತಿ ಲೆಕ್ಕಾಚಾರ:

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಾತಿ ಲೆಕ್ಕಾಚಾರದಲ್ಲಿ ಚನ್ನಬಸವನಗೌಡ ಪಾಟೀಲ್ ಅವರನ್ನೇ ಮುಂದುವರೆಸಲಾಗಿದೆ ಎನ್ನಲಾಗಿದೆ‌. ಬಳ್ಳಾರಿ ಲೋಕಸಭೆ ವ್ಯಾಪ್ತಿಗೆ ಬರುವ ವಿಜಯನಗರ ಜಿಲ್ಲೆಯ ಕೂಡ್ಲಿಗಿ, ಹಗರಿಬೊಮ್ಮನಹಳ್ಳಿ, ಕೊಟ್ಟೂರು, ಹಡಗಲಿ ತಾಲೂಕುಗಳಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಹಿಂದಿನ ಬಹುತೇಕ ಚುನಾವಣೆಗಳಲ್ಲಿ ಬಿಜೆಪಿ ಪಕ್ಷವನ್ನೇ ಬೆಂಬಲಿಸುತ್ತಾ ಬಂದಿರುವ ಈ ಮತಗಳ ಲೆಕ್ಕಾಚಾರಕ್ಕಾಗಿ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಅದೇ ಸಮುದಾಯದ ಚನ್ನಬಸವನಗೌಡ ಪಾಟೀಲ್ ಅವರನ್ನೇ ಎರಡನೇ ಅವಧಿಗೂ ಮುಂದುವರೆಸಲಾಗಿದೆ ಎನ್ನಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next