Advertisement

ಅನುದಾನವಿಲ್ಲದೆ ಅರ್ಧಕ್ಕೆ ನಿಂತ ಹಾಸ್ಟೆಲ್‌ ಕಾಮಗಾರಿ

11:23 AM Oct 10, 2019 | Naveen |

„ಶಶೀಂದ್ರ ಸಿ.ಎಸ್‌. ಮೇಕೆರ್‌
ಚನ್ನಗಿರಿ: ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ ಹಾಗೂ ಸ್ನಾತ್ತಕೋತ್ತರ ಕೇಂದ್ರದ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ ದಾವಣಗೆರೆ ವಿಶ್ವವಿದ್ಯಾಲಯ ಅನುದಾನದಲ್ಲಿ ನಿರ್ಮಿಸುತ್ತಿರುವ ಮಹಿಳಾ ಪಿಜಿ ಹಾಸ್ಟೆಲ್‌ ಕಟ್ಟಡ ಕಾಮಗಾರಿ ಸರ್ಕಾರದ ಅನುದಾನ ದೊರೆಯದೇ ಅರ್ಧದಲ್ಲೇ ಸ್ಥಗಿತಗೊಂಡಿದ್ದು, ವಿದ್ಯಾರ್ಥಿಗಳು ಪರದಾಡುವಂತಾಗಿದೆ.

Advertisement

ಚನ್ನಗಿರಿಯ ಸ್ನಾತಕೋತ್ತರ ಕೇಂದ್ರದಲ್ಲಿ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ದಾವಣಗೆರೆ, ಚಿತ್ರದುರ್ಗ ಜಿಲ್ಲೆಯ ವಿದ್ಯಾರ್ಥಿನಿಯರ ಅನುಕೂಲಕ್ಕಾಗಿ 2015ರಲ್ಲಿ ಯುಜಿಸಿಗೆ ಪತ್ರ ಬರೆದು ಹಾಸ್ಟೆಲ್‌ ನಿರ್ಮಾಣಕ್ಕೆ ಮಂಜೂರಾತಿ ಪಡೆಯಲಾಯಿತು. ದಾವಣಗೆರೆ ವಿವಿಯ ಅಧಿಕಾರಿಗಳು ಬಂದು ಸ್ಥಳ ಪರಿಶೀಲಿಸಿ ಒಟ್ಟು 3 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಿಸಲು ನಿರ್ಧರಿಸಲಾಯಿತು. ಮೊದಲ ಹಂತದಲ್ಲಿ ದಾವಣಗೆರೆ ವಿವಿ 40 ಲಕ್ಷ ರೂ. ಅನುದಾನ ಮಂಜೂರು ಮಾಡಿತು. ಉಳಿದ 2.60 ಕೋಟಿ ವೆಚ್ಚದ ಕ್ರಿಯಾಯೋಜನೆ ರೂಪಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಯಿತು.

ಕಟ್ಟಡ ಕಾಮಗಾರಿ ಹೊಣೆಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಲಾಗಿದೆ. ಆದರೆ ಸರ್ಕಾರದಿಂದ ಈವರೆಗೂ ಯಾವುದೇ ಅನುದಾನ ಬಂದಿಲ್ಲ. ಪ್ರಾರಂಭದಲ್ಲಿ ಹಾಸ್ಟೆಲ್‌ ಕಟ್ಟಡ ಕಾಮಗಾರಿ ಚೆನ್ನಾಗಿಯೇ ನಡೆಯಿತು. 40 ಲಕ್ಷ ರೂ. ಮುಗಿದ ನಂತರ ಹಣದ ಕೊರತೆಯಿಂದ ಸಂಬಂಧಪಟ್ಟವರು ಕೈಕಟ್ಟಿ ಕುಳಿತಿದ್ದಾರೆ.

ಕಾಲೇಜಿನ ಆಡಳಿತ ಮಂಡಳಿಯವರು ಅನುದಾನಕ್ಕಾಗಿ ಕಳೆದ 4 ವರ್ಷಗಳಿಂದ ಕಾಯುತ್ತಿದ್ದಾರೆ. ಕಟ್ಟಡ ಪೂರ್ಣಗೊಳ್ಳದೆ ಪಾಳು ಬೀಳುವ ಸ್ಥಿತಿಗೆ ತಲುಪಿದೆ. ಸುತ್ತಲೂ ಗಿಡಗಂಟಿ ಬೆಳೆದು ಕಟ್ಟಡವನ್ನೆಲ್ಲ ಆವರಿಸಿವೆ.

ಖಾಸಗಿ ರೂಂಗಳ ಮೊರೆ: ಹೊರಗಿನಿಂದ ಬರುವ ವಿದ್ಯಾರ್ಥಿಗಳು ಅನಿವಾರ್ಯವಾಗಿ ದುಬಾರಿ ಖಾಸಗಿ ರೂಂಗಳು ಹಾಗೂ ಮೆಸ್‌ ಮೊರೆ ಹೋಗಬೇಕಿದೆ. ಇದರಿಂದ ಉನ್ನತ ಶಿಕ್ಷಣ ಪಡೆಯುವುದು ಹೊರೆಯಾಗಿದ್ದು, ಬಡ ವಿದ್ಯಾರ್ಥಿಗಳ ಸಮಸ್ಯೆ ಕೇಳ್ಳೋರಿಲ್ಲವಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next