ಬೆಂಗಳೂರು : ಚುನಾವಣೆಯ ಹೊಸ್ತಿಲಲ್ಲಿ ನಡೆದ ಮಹತ್ವದ ಲೋಕಾಯುಕ್ತ ಆಧಿಕಾರಿಗಳ ಕಾರ್ಯಾಚರಣೆಯಲ್ಲಿ ಗುರುವಾರ ದಾವಣಗೆರೆ ಜಿಲ್ಲೆಯ ಚನ್ನಗಿರಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಮಾಡಾಳ್ ಪ್ರಶಾಂತ್ ಅವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಗುತ್ತಿಗೆದಾರನೊಬ್ಬನ ಬಳಿ 80 ಲಕ್ಷ ರೂ.ಗೂ ಹೆಚ್ಚು ಲಂಚಕ್ಕೆ ಬೇಡಿಕೆ ಇಟ್ಟಿದ್ದು, ಕ್ರೆಸೆಂಟ್ ರಸ್ತೆಯಲ್ಲಿರುವ ಕಚೇರಿಯಲ್ಲಿ ಮುಂಗಡವಾಗಿ 40 ಲಕ್ಷ ರೂ. ಹಣ ಪಡೆದುಕೊಳ್ಳುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಬಿದಿದ್ದಾರೆ. ಶಾಸಕರ ಪುತ್ರ ಪ್ರಶಾಂತ್ ಬಿಡಬ್ಲ್ಯೂ ಎಸ್ ಎಸ್ ಬಿ ಮುಖ್ಯ ಲೆಕ್ಕಾಧಿಕಾರಿಯಾಗಿರುವ ಪ್ರಶಾಂತ್ ಕೆಎಸ್ ಡಿಎಲ್ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚ ಪಡೆಯುತ್ತಿದ್ದರು ಎನ್ನಲಾಗಿದೆ.
2008ರ ಬ್ಯಾಚ್ ನ ಕೆಎಎಸ್ ಅಧಿಕಾರಿಯಾಗಿದ್ದ ಪ್ರಶಾಂತ್ ಟೆಂಡರನಲ್ಲಿ ಅವ್ಯವಹಾರ ನಡೆಸುತ್ತಿರುವ ಬಗ್ಗೆ ದೂರು ಕೇಳಿ ಬಂದಿತ್ತು ಎನ್ನಲಾಗಿದೆ. ಕಚೇರಿಯಲ್ಲಿ ಸಿಕ್ಕಿರುವ ಎಲ್ಲ ಹಣವನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
40 ಲಕ್ಷದ ಮಾತ್ರವಲ್ಲದೆ ಕೋಟಿ ರೂ. ಗೂ ಹೆಚ್ಚು ಹಣ ಪತ್ತೆಯಾಗಿದೆ ಎಂದು ಲೋಕಾಯುಕ್ತ ಐಜಿಪಿ ಡಾ.ಎ.ಸುಬ್ರಹ್ಮಣ್ಯೇಶ್ವರ ರಾವ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.