Advertisement

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

05:04 PM May 26, 2024 | Team Udayavani |

ದಾವಣಗೆರೆ: ಚನ್ನಗಿರಿಯಲ್ಲಿ ಮೇ 25ರ ಶುಕ್ರವಾರ ನಡೆದ ಘಟನೆಗೆ ಸಂಬಂಧಿಸಿದಂತೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಒಟ್ಟು ಚನ್ನಗಿರಿ ಠಾಣೆಯಲ್ಲಿ ಆರು ಪ್ರಕರಣಗಳ ಪೈಕಿ ನಾಲ್ಕು ಪ್ರಕರಣಗಳಲ್ಲಿ ಈವರೆಗೆ 25 ಜನ ಆರೋಪಿಗಳ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

Advertisement

ಶುಕ್ರವಾರ ರಾತ್ರಿ ಎಂಟು ಗಂಟೆಗೆ ಆದಿಲ್ (ಮೃತಪಟ್ಟಿರುವ ವ್ಯಕ್ತಿ) ಮಟ್ಕಾ ಜೂಜಾಟದಲ್ಲಿ ನಿರತನಾಗಿರುವ ಕುರಿತು ಮಾಹಿತಿ ಬಂದ ಮೇರೆಗೆ ವಿಚಾರಣೆಗೆ ಠಾಣೆಗೆ ಕರೆತಂದಾಗ ಕುಸಿದು ಬಿದ್ದುವನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ಒಳಪಡಿಸಿದಾಗ ಮೃತನಾಗಿದ್ದು, ಈ ಸಂಬಂಧ ಚನ್ನಗಿರಿ ಪೊಲೀಸ್ ಠಾಣೆ ಯುಡಿಆರ್ ನಂಬರ್ 17/2024 ಕಲಂ 174 ಸಿಆರ್.ಪಿ.ಸಿ 174, 176(1-ಎ) ರೀತ್ಯಾ ಪ್ರಕರಣ ದಾಖಲಾಗಿತ್ತು.

ಮೃತನ ಸಾವಿನ ಬಗ್ಗೆ ತಪ್ಪಾಗಿ ಗ್ರಹಿಸಿದ ಕುಟುಂಬಸ್ಥರು ಮತ್ತು ಸಮುದಾಯದವರು ಶವವನ್ನು ಇಟ್ಟು ಠಾಣೆಯಲ್ಲಿ ಪ್ರತಿಭಟನೆ ಮಾಡುತ್ತಿರುವಾಗ ಅದರಲ್ಲಿ ಉದ್ರಿಕ್ತ ಗುಂಪು ಪೊಲೀಸರು ಮೇಲೆ ಕಲ್ಲು ತೂರಾಟ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿ ಪೊಲೀಸ್ ನವರಿಗೆ ಗಾಯಪಡಿಸಿ ಹಾಗೂ ಸರ್ಕಾರಿ ಸ್ವತ್ತುಗಳನ್ನು ದ್ವಂಸಗೊಳಿಸಿದ್ದರು.

ಕೃತ್ಯಕ್ಕೆ ಸಂಬಂಧಪಟ್ಟಂತೆ ಚನ್ನಗಿರಿ ಠಾಣೆಯಲ್ಲಿ6 ಪ್ರಕರಣಗಳು ದಾಖಲಾಗಿದ್ದು,‌ ಮೇ 25 ರಂದು 6 ಪ್ರಕರಣಗಳ ಪೈಕಿ 4 ಪ್ರಕರಣಗಳಲ್ಲಿ 25 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ನಡೆದ ಘಟನೆಯ ಹಿನ್ನೆಲೆಯಲ್ಲಿ ಸಂಪೂರ್ಣ ನಿಗಾವಹಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.‌ ಅಲ್ಲದೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಪರಿಸ್ಥಿತಿ ಸಹಜವಾಗಿಯೇ ಇದೆ.

Advertisement

ಚನ್ನಗಿರಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಧಾರ್ಮಿಕ ನಿಂದನೆ, ವ್ಯಕ್ತಿ ನಿಂದನೆಯ ಪೋಸ್ಟ್‌, ಪ್ರಚೋದನಾಕರಿ ಹೇಳಿಕೆಗಳು, ಪೋಸ್ಟ್, ವಿಡಿಯೋ ಹಾಗೂ ಪೋಟೋಗಳನ್ನು ಶೇರ್ ಮಾಡಬಾರದು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬರುವಂತಹ ಪೋಸ್ಟ್ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಾದ್ಯಂತ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next