ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರವನ್ನು ಬಿಜೆಪಿಯ ಒತ್ತಾಯದ ಮೇರೆಗೆ ಬಿಟ್ಟು ಕೊಟ್ಟು ನಮ್ಮ ಕುಟುಂಬದವರನ್ನೇ ಅಭ್ಯರ್ಥಿಯನ್ನಾಗಿ ಮಾಡಲಾಗಿತ್ತು. ಅದರಂತೆ ಈಗ 3 ಕ್ಷೇತ್ರಗಳ ಪೈಕಿ 2 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದಾರೆ. ಈಗ ಚನ್ನಪಟ್ಟಣ ಕ್ಷೇತ್ರವನ್ನು ನಮಗೆ ಬಿಟ್ಟುಕೊಡುವ ಔದಾರ್ಯತೆ ಅವರ ಕಡೆಯಿಂದಲೂ ಬರಬೇಕು ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಪಾಂಡವಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಟಿಕೆಟ್ ವಿಚಾರದಲ್ಲಿ ಗೊಂದಲ ಇಲ್ಲ. ದಿಲ್ಲಿ ಮಟ್ಟದಲ್ಲಿಯೇ ಚನ್ನಪಟ್ಟಣ ಜೆಡಿಎಸ್ ಕ್ಷೇತ್ರ ಎಂದಾಗಿದೆ. ನ್ಯಾಯವಾಗಿ ಚರ್ಚೆ ಮಾಡುವುದಾದರೆ ಕ್ಷೇತ್ರ ಜೆಡಿಎಸ್‌ಗೆà ಬರಬೇಕು ಎಂದರು.
ಎರಡು ಬಾರಿ ಕ್ಷೇತ್ರ ಪ್ರತಿನಿ ಧಿಸಿದ್ದೇನೆ. ಇಲ್ಲಿ ಜೆಡಿಎಸ್ ಕಾರ್ಯಕರ್ತರ ಪಡೆಯೇ ಇದೆ. ಇದೀಗ ಸಿ.ಪಿ.ಯೋಗೇಶ್ವರ್ ಅವರು ಸ್ಪರ್ಧಿಸಬೇಕೆನ್ನುತ್ತಿದ್ದಾರೆ. ಚನ್ನಪಟ್ಟಣಕ್ಕೆ ನಮ್ಮ ಪಕ್ಷದ ಅಭ್ಯರ್ಥಿಯನ್ನೇ ಘೋಷಣೆ ಮಾಡುತ್ತೇವೆ ಎನ್ನುವ ಮೂಲಕ ಸಿ.ಪಿ.ಯೋಗೇಶ್ವರ್, ಜೆಡಿಎಸ್‌ನಿಂದಲೇ ಸ್ಪ ರ್ಧಿಸಲಿ ಎಂಬುದನ್ನು ಪರೋಕ್ಷವಾಗಿ ಹೇಳಿದರು.
ಯೋಗೇಶ್ವರ್ ನಾಮಪತ್ರ ಸಲ್ಲಿಸುವ ವಿಚಾರ ನನಗೆ ಗೊತ್ತಿಲ್ಲ. ನನ್ನೊಂದಿಗೆ ಯಾವುದೇ ಚರ್ಚೆಯಾಗಿಲ್ಲ. ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ್ದಾರೆ, ಪಕ್ಷೇತರ ಅಭ್ಯರ್ಥಿಯಾಗುತ್ತಾರೆ ಎಂದು ಮಾಧ್ಯಮಗಳಲ್ಲಿಯ ವರದಿ ನೋಡಿದ್ದೇನೆ. ಕಾಂಗ್ರೆಸ್‌ನವರು ತಮ್ಮ ಪಕ್ಷಕ್ಕೆ ಕರೆದೊಯ್ದು ಅಭ್ಯರ್ಥಿಯನ್ನಾಗಿ ಮಾಡಲು ಮುಂದಾಗಿದ್ದಾರೆ. ನಮ್ಮಲ್ಲಿ ಒಡಕು ಮೂಡಲಿ ಎಂದು ಕಾಯುತ್ತಿದ್ದಾರೆ ಎಂದು ಹೇಳಿದರು.