Advertisement

Channapatna By Election; 3 ಸಾವಿರ ಮಂದಿಗೆ ಸಿದ್ದ ಮಾಡಿದ್ದ ಬಿರಿಯಾನಿ ವಶಕ್ಕೆ

02:30 PM Oct 16, 2024 | Team Udayavani |

ರಾಮನಗರ:ಚನ್ನಪಟ್ಟಣ ಉಪಚುನಾವಣೆ ಅಖಾಡದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು ಪಡೆದಿದ್ದು,   ಜನರಿಗೆ ಹಂಚಲು ತಯಾರು ಮಾಡಿಟ್ಟಿದ್ದ ಬಿರಿಯಾನಿಯನ್ನು ಚುನಾವಣಾ ಅಧಿಕಾರಿಗಳು ಬುಧವಾರ(ಅ16 ) ಸೀಜ್ ಮಾಡಿದ್ದಾರೆ.

Advertisement

ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ನೇತೃತ್ವದಲ್ಲಿ ಚನ್ನಪಟ್ಟಣದ ಶಿಶಿರಾ ರೆಸಾರ್ಟ್‌ ನಲ್ಲಿ ಕರೆಯಲಾಗಿದ್ದ ಬಿಜೆಪಿ ಕಾರ್ಯಕರ್ತರು, ಅಭಿಮಾನಿಗಳ ಸಭೆಯಲ್ಲಿ ಪಾಲ್ಗೊಂಡಿದ್ದ 3 ಸಾವಿರಕ್ಕೂ ಹೆಚ್ಚು ಮಂದಿಗೆ ಸಿದ್ದವಾಗಿದ್ದ ಬಿರಿಯಾನಿಯನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಚುನಾವಣಾ ಅಧಿಕಾರಿಯಾದ ಉಪವಿಭಾಗಾಧಿಕಾರಿ ಬಿನೋಯ್ ನೇತೃತ್ವದಲ್ಲಿ ದಾಳಿ ಮಾಡಿದ ಅಧಿಕಾರಿಗಳು ಬಿರಿಯಾನಿ ವಶ ಪಡೆದುಕೊಂಡಿದ್ದಾರೆ.

ನೀತಿಸಂಹಿತೆ ಯನ್ವಯ ಬಾಡೂಟ ಮಾಡಿಸಲು ಅವಕಾಶವಿರಲಿಲ್ಲ. ಸಭೆಗೆ ಅನುಮತಿ ಪಡೆಯಲಾಗಿತ್ತಾದರೂ ಕಾರ್ಯಕರ್ತರಿಗೆ ಮಜ್ಜಿಗೆ ನೀರು, ಕಾಫಿ ಟೀ ವಿತರಣೆಗೆ ಮಾತ್ರ ಅವಕಾಶ ನೀಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next