Advertisement

Channapatna By election: ನಾಮಪತ್ರ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

12:48 AM Oct 26, 2024 | Team Udayavani |

ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಶುಕ್ರವಾರ (ಅ.25) ನಾಮಪತ್ರ ಸಲ್ಲಿಕೆ ಮಾಡಿದರು.

Advertisement

ನಾಮಪತ್ರ ಸಲ್ಲಿಕೆಗೂ ಮುನ್ನಾ ಕೆಂಗಲ್ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿದರು. ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಕುಮಾರಸ್ವಾಮಿ, ಮಾಜಿ ಸಿಎಂ ಸದಾನಂದಗೌಡ, ಆರ್ ಅಶೋಕ್ ಸೇರಿ ಎನ್‌ ಡಿಎಯ ಹಲವು ಮುಖಂಡರು ಭಾಗಿಯಾಗಿದ್ದರು.

ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್ ಶೋ ಮೂಲಕ ಶಕ್ತಿ ಪ್ರದರ್ಶನ ಮಾಡಲಾಯಿತು.

ಸುಲಭದ ಚುನಾವಣೆ ಅಂತ ನಿಖಿಲ್‌ ಕಣಕ್ಕಿಳಿಸಿಲ್ಲ: ಎಚ್‌ಡಿಕೆ
ರಾಮನಗರ: ಪ್ರಧಾನಿ ಮೋದಿ ಅವರ ನಾಯಕತ್ವವನ್ನು ಅಸ್ಥಿರಗೊಳಿಸಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ. ಈ ಸಮಯದಲ್ಲಿ ಮೋದಿ ಅವರಿಗೆ ಶಕ್ತಿ ತುಂಬಬೇಕಿದ್ದು ಇದಕ್ಕಾಗಿ ನಿಖೀಲ್‌ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದ್ದೇವೆ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ನಾಮಪತ್ರ ಸಲ್ಲಿಕೆಯ ಬಳಿಕ ಮಾತನಾಡಿ, ಯೋಗೇಶ್ವರ್‌ ಮೊದಲೇ ತೀರ್ಮಾನ ಮಾಡಿಕೊಂಡು ಕಾಂಗ್ರೆಸ್‌ ಸೇರಿದ್ದಾರೆ. ಬಿಜೆಪಿ ನಾಯಕರು ಅವರನ್ನೇ ಅಭ್ಯರ್ಥಿ ಮಾಡುವಂತೆ ಒತ್ತಾಯಿಸಿದ್ದರು. ನಾನು ಒಪ್ಪಿದ್ದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಅವರು ಯೋಗೇಶ್ವರ್‌ ಮನವೊಲಿಸುತ್ತೇವೆ, ಅವರನ್ನ ನಿಮ್ಮ ಅಭ್ಯರ್ಥಿ ಮಾಡಿಕೊಳ್ಳಿ ಎಂದಿದ್ದರು. ಆದರೆ, ಅವರು ಕಾಂಗ್ರೆಸ್‌ ಸೇರಿದರು. ಎರಡೂ ಪಕ್ಷದ ನಾಯಕರ ನಿರ್ಣಯದಿಂದ ನಿಖಿಲ್‌ ಸ್ಪರ್ಧೆ ಮಾಡಿದ್ದಾರೆ. ಇವರು ಅನಿವಾರ್ಯವಾಗಿ ಅಭ್ಯರ್ಥಿಯಾಗಿದ್ದಾರೆ. ನಾವು ಸುಲಭದ ಚುನಾವಣೆ ಎಂದು ನಿಖಿಲ್‌ ಅವರನ್ನು ಕಣಕ್ಕಿಳಿಸಿಲ್ಲ ಎಂದು ಹೇಳಿದರು.

Advertisement

ಎನ್‌ಡಿಎ, ಬಿಜೆಪಿ ನಾಯಕರ ಸಾಥ್‌
ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ನಿಖಿಲ್‌ಕುಮಾರಸ್ವಾಮಿ ಬೃಹತ್‌ ರೋಡ್‌ಶೋ ನಡೆಸಿದರು.

ಎಚ್‌.ಡಿ.ಕುಮಾರಸ್ವಾಮಿ, ಡಿ.ವಿ.ಸದಾನಂದ ಗೌಡ, ಆರ್‌.ಅಶೋಕ್‌, ಡಾ| ಸಿ.ಎನ್‌. ಅಶ್ವತ್ಥನಾರಾಯಣ ಇತರಿದ್ದರು. ಶಿಗ್ಗಾಂವಿ ರೋಡ್‌ಶೋನಲ್ಲಿ ಭರತ್‌ ಬೊಮ್ಮಾಯಿ ಪರವಾಗಿ ಬಿ.ಎಸ್‌.ಯಡಿಯೂರಪ್ಪ, ಪ್ರಹ್ಲಾದ್‌ ಜೋಶಿ, ಬಸವರಾಜ ಬೊಮ್ಮಾಯಿ, ಗೋವಿಂದ ಕಾರಜೊಳ ಇತರರು ಪಾಲ್ಗೊಂಡಿದ್ದರು.

ಸಂಡೂರಿನಲ್ಲಿ ಹಮ್ಮಿಕೊಂಡಿದ್ದ ಮೆರವಣಿಗೆಯಲ್ಲಿ ಬಂಗಾರು ಹನುಮಂತು ಪರವಾಗಿ ಬಿ.ವೈ. ವಿಜಯೇಂದ್ರ, ಜನಾರ್ದನರೆಡ್ಡಿ, ಶ್ರೀರಾಮುಲು, ಜೆಡಿಎಸ್‌ ಮುಖಂಡರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next