Advertisement

Channapatna Bypoll; ಮೈತ್ರಿ ಪಕ್ಷದ ಅಭ್ಯರ್ಥಿ ನಾನೇ…: ಸಿ.ಪಿ ಯೋಗೇಶ್ವರ್ ಹೇಳಿದ್ದೇನು?

03:11 PM Jul 05, 2024 | Team Udayavani |

ರಾಮನಗರ: ಚನ್ನಪಟ್ಟಣ ಉಪಚುನಾವಣೆಗೆ ಮೈತ್ರಿ ಅಭ್ಯರ್ಥಿ ಘೋಷಣೆ ವಿಚಾರವಾಗಿ ಕಳೆದ ವಾರ ನಾನು ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೆ. ಆದಷ್ಟು ಬೇಗ ಅಭ್ಯರ್ಥಿ ಹೆಸರು ಸೂಚಿಸುವಂತೆ ಕೇಳಿದ್ದೇನೆ. ಈಗಾಗಲೇ ಕಾಂಗ್ರೆಸ್ ಚುನಾವಣೆಗೆ ಹೋಗ್ತಿದ್ದಾರೆ. ಹಾಗಾಗಿ ಮೈತ್ರಿ ಅಭ್ಯರ್ಥಿ ಆಯ್ಕೆ ಮಾಡಿ ಎಂದು ಮನವಿ ಮಾಡಿದ್ದೇನೆ. ಎಚ್ಡಿಕೆ ಅವರು ನನ್ನನ್ನೇ ನಿಲ್ಲುವಂತೆ ಹೇಳಿದ್ದಾರೆ! ಅದಕ್ಕೆ ಅಧಿಕೃತ ಅನುಮೋದನೆ ಅವರೇ ಕೊಡಬೇಕು ಎಂದು ಮಾಜಿ ಸಚಿವ ಸಿಪಿ ಯೋಗೇಶ್ವರ್ ಹೇಳೀದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈತ್ರಿ ಪಕ್ಷದ ವರಿಷ್ಠರು ಅಧಿಕೃತ ಘೋಷಣೆ ಮಾಡಬೇಕು. ಹಾಗಾಗಿ ನೀವೇ ಬಂದು ಹೆಸರು ಘೋಷಣೆ ಮಾಡಿ ಅವರನ್ನೇ ಕೇಳಿದ್ದೇನೆ. ಮೈತ್ರಿ ಪಕ್ಷದಿಂದ ನಾನೇ ಅಭ್ಯರ್ಥಿ ಎಂದು ಹೇಳಿದರು.

ಸರ್ಕಾರದ ಹಣದಲ್ಲಿ ಉಪಚುನಾವಣೆ ಮಾಡುತ್ತಿದ್ದಾರೆ. ಡಿಕೆ ಶಿವಕುಮಾರ್ ಕನಕಪುರದಿಂದ ಗೆದ್ದು ರಾಮನಗರ ಉಸ್ತುವಾರಿ ತೆಗೆದುಕೊಂಡಿಲ್ಲ. ಹೋಗಿ ಬೆಂಗಳೂರು ಉಸ್ತುವಾರಿ ತೆಗೆದುಕೊಂಡಿರುವುದು ಯಾಕೆ? ಈಗ ಚುನಾವಣೆ ಸಮಯದಲ್ಲಿ ಮಾತ್ರ ಚನ್ನಪಟ್ಟಣ ನೆನಪಾಗಿರುವುದು. ಚನ್ನಪಟ್ಟಣ ಜನ ಬುದ್ಧಿವಂತರಿದ್ದಾರೆ. ಇಂತಹ ನಾಟಕಗಳಿಗೆ ನಮ್ಮ ಜನ ಉತ್ತರ ಕೊಡುತ್ತಾರೆ ಎಂದರು.

ಕಳೆದ ವಾರದಲ್ಲಿ ಡಿಸಿಎಂ ಡಿಕೆಶಿ ಮೂರು ದಿನ ಜನಸ್ಪಂದನಾ ಕಾರ್ಯಕ್ರಮ ಮಾಡಿದ್ದಾರೆ. ಉಪಚುನಾವಣೆ ದೃಷ್ಠಿಯಲ್ಲಿ ಮಾಡಿರುವು ಸರ್ಕಾರಿ ಸಂತೆಯದು. ಯಾವುದೇ ಗುರಿ ಇಲ್ಲದೆ, ಯೋಜನೆ ಇಲ್ಲದೆ ಮಾಡಿರುವ ಕಾರ್ಯಕ್ರಮ. ಅಧಿಕಾರಿಗಳನ್ನು ಚನ್ನಪಟ್ಟಣಕ್ಕೆ ಕರೆತಂದು ಹೆದರಿಸಿ ಜನರಿಗೆ ಆಸೆ ತೋರಿಸುವ ಕೆಲಸ ಮಾಡಿದ್ದಾರೆ. ಕಳೆದ ಒಂದು ಕಾಲು ವರ್ಷದ ಅವಧಿಯಲ್ಲಿ ಸರ್ಕಾರ ಸಾರ್ವಜನಿಕರಿಗೆ ಯಾವುದೇ ಕಾರ್ಯಕ್ರಮ ಹಮ್ಮಿಕೊಂಡಿಲ್ಲ. ಸರ್ಕಾರದ ನಿಯಮಗಳನ್ನ ಗಾಳಿಗೆ ತೂರಿ ಒನ್ ಮ್ಯಾನ್ ಶೋ ಮಾಡಿದ್ದಾರೆ. ಎಂಪಿಗೆ ಆಹ್ವಾನ ನೀಡಿಲ್ಲ, ನನಗೆ ಆಹ್ವಾನ ನೀಡಿಲ್ಲ. ಸರ್ಕಾರದ ಪ್ರೋಟೋಕಾಲ್ ಸರಿಯಾಗಿ ಅನುಸರಿಸದೆ ಕಾರ್ಯಕ್ರಮ ಮಾಡಿದ್ದಾರೆ. ಕೇವಲ ಚುನಾವಣಾ ತಂತ್ರಕ್ಕೆ ಜನ ಸೇರಿಸಿ ಜಾತ್ರೆ ಮಾಡಿದ್ದಾರೆ ಎಂದು ಟೀಕಿಸಿದರು.

ಸರ್ಕಾರ ಬಂದಾಗಿನಿಂದಲೂ ಚನ್ನಪಟ್ಟಣಕ್ಕೆ ಬಂದಿರಲಿಲ್ಲ. ಈಗ ಚನ್ನಪಟ್ಟಣ ಖಾಲಿ ಇದೆ, ಬಂದಿದ್ದೇನೆ ಅಂತ ಸುಳ್ಳು ಹೇಳುತ್ತಿದ್ದಾರೆ. ಜನರಿಗೆ ಮನೆ ಕೊಡುತ್ತೇವೆ, ಸೈಟ್ ಕೊಡ್ತೀನಿ ಎಂದು ಸುಳ್ಳು ಆಶ್ವಾಸನೆ ಕೊಡುತ್ತಿದ್ದಾರೆ. ಟೌನ್ ವ್ಯಾಪ್ತಿ ಬಿಟ್ಟರೆ ಬಹುತೇಕ ತಾಲೂಕಿನ ಜನತೆಗೆ ಮನೆ ಸಮಸ್ಯೆ ಇಲ್ಲ. ಚುನಾವಣೆಗೆ ಟೈಂ ನಲ್ಲಿ ಮನೆ ಕೊಡುತ್ತೇವೆಂದು ಎನ್ನುವುದು ಸುಳ್ಳು ಎಂದರು.

Advertisement

ಅವರ ಸರ್ಕಾರ ಕುಸಿಯುವ ಹಂತ ತಲುಪಿದೆ. ಅವರ ಸರ್ಕಾರದಲ್ಲೇ ಸಾಕಷ್ಟು ಗೊಂದಲವಿದೆ. ನೂರೆಂಟು ಹಗರಣಗಳು ಬೆಳಕಿಗೆ ಬರುತ್ತಿದೆ. ಮುಡಾ ಹಗರಣ, ವಾಲ್ಮೀಕಿ ನಿಗಮದ ಹಗರಣ ನೋಡಿದ್ದೇವೆ. ಉಪಚುನಾವಣೆ ಹೊತ್ತಿಗೆ ಅವರ ಸರ್ಕಾರ ಇರುತ್ತೋ, ಇರಲ್ವೋ ಗೊತ್ತಿಲ್ಲ ಎಂದು ಡಿಕೆ ಶಿವಕುಮಾರ್ ಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಟಾಂಗ್ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next