Advertisement

Nikhil Kumaraswamy; ಚನ್ನಪಟ್ಟಣದಲ್ಲಿ ಸ್ಪರ್ಧೆ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಲ್ಲ

01:24 PM Sep 04, 2024 | Team Udayavani |

ಕೊಪ್ಪಳ : ‘ಚನ್ನಪಟ್ಟಣದಲ್ಲಿ ಉಪಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಹೇಳಿಲ್ಲ’ ಎಂದು ಜೆಡಿಎಸ್(JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ(Nikhil Kumaraswamy) ಬುಧವಾರ(ಸೆ 4) ಹೇಳಿಕೆ ನೀಡಿದ್ದಾರೆ.

Advertisement

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ” ನಾನು ಚನ್ನಪಟ್ಟಣ ದಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಎಲ್ಲಿಯೂ ಬಹಿರಂಗವಾಗಿ ಮಾತನಾಡಿಲ್ಲ. ಆದರೆ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಚನ್ನಪಟ್ಟಣ ಕುಮಾರಸ್ವಾಮಿ ಅವರು ಪ್ರತಿನಿಧಿಸಿದ ಕ್ಷೇತ್ರ, ಅವರೀಗ ದೆಹಲಿಗೆ ಹೋಗಿದ್ದಾರೆ. ನಾನು ನಿರಂತರವಾಗಿ ಕ್ಷೇತ್ರದಲ್ಲಿ ಪ್ರವಾಸ ಮಾಡುತ್ತಿದ್ದು, ಜನರ ಅಭಿಪ್ರಾಯ ಸಂಗ್ರಹ ಮಾಡಿ ಹಿರಿಯರ ಮುಂದೆ ಇಡುತ್ತೇನೆ ‘ ಎಂದರು.

ಟಿಕೆಟ್ ಬಗ್ಗೆ ನಮ್ಮಲ್ಲಿ ಯಾವುದೇ ಗೊಂದಲ ಇಲ್ಲ. ಅಲ್ಲಿ ಯಾರೇ ಆಗಲಿ ಎನ್ ಡಿಎ ಅಭ್ಯರ್ಥಿ ಸ್ಪರ್ಧೆ ಮಾಡಿ ಗೆಲುವು ಸಾಧಿಸಲಿದ್ದಾರೆ. ಸಿ.ಪಿ.ಯೋಗೇಶ್ವರ್‌ ಅವರು ಸದ್ಯ ಎಂಎಲ್ ಸಿ ಯಾಗಿದ್ದಾರೆ.ಅವರ ಅಧಿಕಾರವಧಿ ಇನ್ನೂ ಇದೆ ಎಂದರು.

‘ಕಾಂಗ್ರೆಸ್ ಅನ್ನು ದೂರ ಇಡಲು ಬೇಕಾದ ಎಲ್ಲ ಕ್ರಮ ಕೈಗೊಳ್ಳುತ್ತೇವೆ.ನಾನು ಕಾರ್ಯಕರ್ತನಾಗಿ ಪ್ರಮಾಣಿಕವಾಗಿ ಕೆಲಸ ಮಾಡುತ್ತೇನೆ. ಕುಮಾರಸ್ವಾಮಿ ಅವರಿಗೆ ಐದು ವರ್ಷದ ಅಧಿಕಾರ ನೀಡಿ ಚನ್ನಪಟ್ಟಣದ ಜನ ಗೆಲ್ಲಿಸಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ಎರಡೂ ಪಕ್ಷದ ನಾಯಕರು ಸೇರಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ. ಯಾರಿಗೆ ಅವಕಾಶ ನೀಡಬೇಕು ಎಂಬ ಬಗ್ಗೆ ಜನ ನಿರ್ಧಾರ ಮಾಡುತ್ತಾರೆ’ ಎಂದರು.

Advertisement

‘ಕಾಂಗ್ರೆಸ್ ಸರಕಾರ ಐದು ಗ್ಯಾರಂಟಿಗಳನ್ನು ಸರಿಯಾಗಿ ಅನುಷ್ಠಾನ ಮಾಡಿಲ್ಲ. ಗ್ಯಾರಂಟಿ ನೀಡಿರುವ ರಾಜ್ಯಗಳ ಆರ್ಥಿಕ ಪರಿಸ್ಥಿತಿ ಇವಾಗ ಏನಾಗಿದೆ?’ ಎಂದು ಪ್ರಶ್ನಿಸಿದರು.

ಕುಮಾರಸ್ವಾಮಿಯವರು ರಾಜಕಾರಣದಲ್ಲಿ ಎಂದೂ ಹಿಟ್ ಆಂಡ್ ರನ್ ಮಾಡಿಲ್ಲ.ಎಲ್ಲಾ ದಾಖಲಾತಿಗಳನ್ನು ಇಟ್ಟುಕೊಂಡು ಮಾತನಾಡುತ್ತಾರೆ. ಯಾವಾಗ ಏನು ಮಾಡಬೇಕೋ, ಬಿಡುಗಡೆ ಮಾಡಬೇಕೋ ಅದನ್ನು ಬಿಡುತ್ತೇವೆ. ನಾವು ಬಿಜೆಪಿ ಜತೆ ಕೈಜೋಡಿಸಿದ್ದೇವೆ ಎಂದ ಮಾತ್ರಕ್ಕೆ ನಾವು ಎಲ್ಲ ಸಿದ್ದಾಂತ ಮಾರಾಟ ಮಾಡಿಕೊಂಡಿದ್ದೇವೆ ಎಂದಲ್ಲ. ನಾವು ಎಲ್ಲಾ ಸಮಾಜದ ಪರವಾಗಿ ಕೆಲಸ ಮಾಡುತ್ತೇವೆ. ಬಿಜೆಪಿ-ಜೆಡಿಎಸ್ ಸಂಬಂಧ ನಿರಂತರವಾಗಿ ಇರಬೇಕು ಅನ್ನೋದು ಎಲ್ಲರ ಆಸೆ. ಜೆಡಿಎಸ್ ರಾಜ್ಯಾದ್ಯಕ್ಷ ಸ್ಥಾನ ಯಾರಿಗೆ ಎನ್ನುವುದು ಮುಂದಿನ ದಿನದಲ್ಲಿ ತೀರ್ಮಾನ ವಾಗಲಿದೆ’ ಎಂದರು.

ನಟ ದರ್ಶನ್ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ ‘ಕಾನೂನು ಎಲ್ಲರಿಗೂ ಒಂದೇ. ಜೈಲಲ್ಲಿ‌ ತಾರತಮ್ಯ ನಡೆದಿರುವ ಬಗ್ಗೆ ನಮ್ಮ ಗಮನಕ್ಕೆ ಬಂದಿದೆ. ಮುಂದಿನ ದಿನದಲ್ಲಿ ಈ ರೀತಿಯ ಘಟನೆ ನಡೆಯದಂತೆ ನೋಡಿಕೊಳ್ಳಬೇಕು’ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next