Advertisement
ಸಭೆ ಬಳಿಕ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ಬಗ್ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು, ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯ ಘೋಷಣೆ ರವಿವಾರ ಅಂತಿಮವಾಗಲಿದೆ. ಆದರೆ ಜೆಡಿಎಸ್ ಚಿಹ್ನೆಯಡಿಯೇ ಸ್ಪರ್ಧೆ ನಡೆಯುತ್ತದೆ ಎಂದಿದ್ದಾರೆ. ಈ ಮೂಲಕ ಚನ್ನಪಟ್ಟಣದಲ್ಲಿ ಜೆಡಿಎಸ್ ಸ್ಪರ್ಧೆ ಖಚಿತವಾದಂತಾದರೂ ಅಭ್ಯರ್ಥಿ ಯಾರು ಎಂಬ ಕುತೂಹಲ ಮುಂದುವರಿದಿದೆ.
Related Articles
ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಮಾಧ್ಯಮದವರೊಂದಿಗೆ ಮಾತನಾಡಿ, 3 ಕ್ಷೇತ್ರಗಳ ಚುನಾವಣೆ ಬಗ್ಗೆ ಚರ್ಚೆ ನಡೆದಿದೆ.ಎಲ್ಲ ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿ ಗಳನ್ನು ಗೆಲ್ಲಿಸುವ ಬಗ್ಗೆ ನಾಯಕರು ಚರ್ಚೆ ಮಾಡಿದ್ದಾರೆ. 2 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯ ಘೋಷಣೆ ರವಿವಾರ ಅಂತಿಮವಾಗಲಿದೆ. ಯಾರೇ ಸ್ಪರ್ಧೆ ಮಾಡಿದರೂ ಜೆಡಿಎಸ್ ಚಿಹ್ನೆಯಡಿಯೇ ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
Advertisement
ಸ್ಪರ್ಧೆಗೆ ಯೋಗೇಶ್ವರ್ ನಿರ್ಧಾರಈ ಮಧ್ಯೆ ಮಾಜಿ ಸಚಿವ ಸಿ.ಪಿ. ಯೋಗೇಶ್ವರ ಸ್ಪರ್ಧೆಯಿಂದ ಹಿಂಜರಿಯದೆ ಇರಲು ತೀರ್ಮಾನಿಸಿದ್ದಾರೆ. 2 ಕ್ಷೇತ್ರದ ಟಿಕೆಟ್ ಘೋಷಣೆಯ ಬಳಿಕವೂ ತಾವೇ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ವಿಶ್ವಾಸವನ್ನು ವ್ಯಕ್ತಪಡಿಸಿದ್ದು, ಕೊನೆಯವರೆಗೂ ಕಾದು ನೋಡುವ ತಂತ್ರಕ್ಕೆ ಶರಣಾಗಿದ್ದಾರೆ. ಒಂದೊಮ್ಮೆ ಜೆಡಿಎಸ್ ಸ್ಪರ್ಧೆ ಖಚಿತವಾದರೆ ಯೋಗೇಶ್ವರ್ ಬಂಡಾಯ ಸ್ಪರ್ಧೆ ಖಚಿತ ಎನ್ನಲಾಗುತ್ತಿದೆ. ಈ ಮಧ್ಯೆ ಬಿಜೆಪಿ-ಜೆಡಿಎಸ್ ನಾಯಕರ ಸಭೆಯಲ್ಲಿ ಯೋಗೇಶ್ವರ್ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಸಾಧ್ಯತೆಯೂ ಪ್ರಸ್ತಾವವಾಗಿದೆ. ಆದರೆ ಒಮ್ಮತ ಮೂಡಿಲ್ಲ. ಬಿಜೆಪಿ ನಾಯಕರು ಕೂಡ ಇದು ಜೆಡಿಎಸ್ ಕ್ಷೇತ್ರ ಎಂದು ಸಭೆಯಲ್ಲಿ ಹೇಳಿಕೆ ನೀಡಿರುವುದು ಕುತೂಹಲಕ್ಕೆ ಕಾರಣವಾಗಿದೆ. ಅಂತಿಮವಾಗಿ ಯೋಗೇಶ್ವರ್ ಎನ್‌ಡಿಎ ಅಭ್ಯರ್ಥಿಯಾಗಿ ಪರಿಗಣಿಸಲ್ಪಟ್ಟರೂ ಅಚ್ಚರಿ ಇಲ್ಲ. ”ಯಾರು ಯಾರ ಮೇಲೂ ದಬ್ಬಾಳಿಕೆ ಮಾಡಲು ಆಗುವುದಿಲ್ಲ. ಪ್ರೀತಿ ವಿಶ್ವಾಸದಿಂದ ಚುನಾವಣೆ ನಡೆಸಬೇಕು. ವಿಶ್ವಾಸಕ್ಕೆ ಧಕ್ಕೆ ಆಗಬಾರದು. ಅದನ್ನು ಎರಡೂ ಪಕ್ಷದ ನಾಯಕರು ಮನವರಿಕೆ ಮಾಡಿಕೊಳ್ಳಬೇಕು. ಒಂದು ಕಡೆ ಪ್ರೀತಿ, ವಿಶ್ವಾಸ ಇದ್ದರೆ ಸಾಲದು. ಎರಡು ಕಡೆಯೂ ಪರಸ್ಪರ ಸ್ಪಂದನೆ ಇರಬೇಕು.”
– ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ