Advertisement
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಶೈಲ ಪೀಠ ಮಾತ್ರವಲ್ಲ ಎಲ್ಲ ಪೀಠಗಳು, ಅವರ ಬೆನ್ನಿಗೆ, ಪರವಾಗಿ ನಿಲ್ಲುತ್ತವೆ. ಶಾಮನೂರು ಶಿವಶಂಕರಪ್ಪ ಅವರು ಬೇರೆ ಪಕ್ಷದ ಶಾಸಕರಾಗಿದ್ದರೂ ಸಮಾಜದವರು, ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಬೆಂಬಲ ವ್ಯಕ್ತಪಡಿಸಿರುವುದ ಕಾಣಬಹುದು ಎಂದರು.
Related Articles
Advertisement
ಬಿಜೆಪಿ ರಾಜ್ಯ ಅಧ್ಯಕ್ಷರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ವೈರಲ್ ಆಗಿದೆ. ಅದು ತಮ್ಮದಲ್ಲ ಎಂದು ಅವರೇ ಸ್ಪಷ್ಟಪಡಿಸಿದ್ದಾರೆ. ಸತ್ಯಾಸತ್ಯತೆ ಏನಿದೆ. ಏನೇನು ನಡೆಯುತ್ತಿದೆ ಎಂಬುದು ಅಸ್ಪಷ್ಟವಾಗಿದೆ ಎಂದು ತಿಳಿಸಿದರು.
ಮುಖ್ಯಮಂತ್ರಿ ಯಡಿಯೂರಪ್ಪ ಬೆನ್ನಿಗೆ ಶ್ರೀಶೈಲ ಪೀಠ ಇರಲಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಅತ್ಯಂತ ಸ್ಪಷ್ಟವಾಗಿ ಪೀಠ ಅವರ ಬೆನ್ನಿಗೆ ನಿಲ್ಲಲಿದೆ ಎಂದು ತಿಳಿಸಿದರು.
ಯಡಿಯೂರಪ್ಪ ಅವರು ಒಂದು ಧರ್ಮ, ಪೀಠ ಮಾತ್ರವಲ್ಲ ಎಲ್ಲ ಜನಾಂಗಕ್ಕೆ ನ್ಯಾಯ ಒದಗಿಸಿದ ಕೀರ್ತಿಗೆ ಪಾತ್ರರಾದವರು. ಹಾಗಾಗಿ ಎಲ್ಲರೂ ಅವರ ಬೆನ್ನಿಗೆ, ಪರವಾಗಿ ನಿಲ್ಲುತ್ತಾರೆ ಎಂದು ತಿಳಿಸಿದರು.
ವೀರಶೈವ ಮಹಾಸಭೆ, ಪಂಚಪೀಠಗಳು ಸೇರಿದಂತೆ ಎಲ್ಲರೂ ಯಡಿಯೂರಪ್ಪ ಅವರ ಪರ ಇವೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಗುರುಪೂರ್ಣಿಮೆ ಪ್ರಯುಕ್ತ ನಾಳೆ(ಬುಧವಾರ) ಬೆಂಗಳೂರಿಗೆ ಹೋಗುತ್ತಿದ್ದೇವೆ. ಅಗತ್ಯ ಬಿದ್ದರೆ ಯಡಿಯೂರಪ್ಪ ಅವರನ್ನ ಭೇಟಿ ಮಾಡಲಾಗುವುದು ಎಂದು ಸ್ವಾಮೀಜಿ ತಿಳಿಸಿದರು.
ಕೇಂದ್ರ ಸರ್ಕಾರ, ಪಕ್ಷದ ಹೈಕಮಾಂಡ್ ಯಡಿಯೂರಪ್ಪ ಅವರನ್ನು ಚೆನ್ನಾಗಿ ನಡೆಸಿಕೊಳ್ಳಬೇಕು. ಯಾವುದೇ ಕಾರಣಕ್ಕೂ ಅವರನ್ನು ಅಗೌರವಯುತವಾಗಿ ನಡೆಸಿಕೊಳ್ಳಬಾರದು. ಅವರೇನಾದರೂ ಹಿಂದೆ ಸರಿಯುವಂತೆ ಮಾಡಿದರೆ ಪಕ್ಷಕ್ಕೆ ತೊಂದರೆ ಆಗುವ ಎಲ್ಲ ಸಾಧ್ಯತೆಗಳು ಇವೆ ಎನ್ನುವ ಮೂಲಕ ಶ್ರೀಶೈಲ ಜಗದ್ಗುರು ಡಾ| ಚನ್ನಸಿದ್ದರಾಮ ಶಿವಾಚಾರ್ಯ ಸ್ವಾಮೀಜಿ ಪರೋಕ್ಷ ಎಚ್ಚರಿಕೆ ಸಂದೇಶ ನೀಡಿದರು.