Advertisement

ದೆಹಲಿ ಟ್ರ್ಯಾಕ್ಟರ್ Rally: ಪೊಲೀಸರನ್ನೇ ಅಟ್ಟಾಡಿಸಿಕೊಂಡು ಹೋದ ರೈತರು, ಹಲವರಿಗೆ ಗಾಯ

01:34 PM Jan 26, 2021 | Team Udayavani |

ನವದೆಹಲಿ: ಕೇಂದ್ರದ ನೂತನ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಮಂಗಳವಾರ(ಜನವರಿ 26, 2021) ದೆಹಲಿಯಲ್ಲಿ ರೈತ ಸಂಘಟನೆಗಳು ನಡೆಸುತ್ತಿರುವ ಟ್ರ್ಯಾಕ್ಟರ್ ರಾಲಿ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟನಾ ನಿರತ ರೈತರನ್ನು ತಡೆದ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.

Advertisement

ರೈತರ ಟ್ರ್ಯಾಕ್ಟರ್ ರಾಲಿಗೆ ಅಡ್ಡಲಾಗಿ ನಿಲ್ಲಿಸಿದ್ದ ಬಸ್ ಗಳ ಗಾಜನ್ನು ಪುಡಿಗೈಯಲಾಗಿದೆ. ಮತ್ತೊಂದೆಡೆ ಮುಂಜಾಗ್ರತಾ ಕ್ರಮವಾಗಿ ದೆಹಲಿ ಮೆಟ್ರೋ ಸಂಚಾರ ಬಂದ್ ಮಾಡಲಾಗಿದೆ ಎಂದು ವರದಿ ತಿಳಿಸಿದೆ.

ಇದನ್ನೂ ಓದಿ:ರೈತರೇ ಕೈ ಮುಗಿದು ಕೇಳುವೆ ಪ್ರತಿಭಟನೆ ಕೈಬಿಡಿ: ಡಿಸಿಎಂ ಗೋವಿಂದ ಕಾರಜೋಳ

ಸೆಂಟ್ರಲ್ ದೆಹಲಿಯ ಐಟಿಒ ಪ್ರದೇಶದಲ್ಲಿ ಆಕ್ರೋಶಗೊಂಡ ರೈತರು ಪೊಲೀಸರ ಮೇಲೆ ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ಪೊಲೀಸರು ದಿಕ್ಕಾಪಾಲಾಗಿ ಓಡಿರುವುದಾಗಿ ವರದಿ ವಿವರಿಸಿದೆ. ಸಾವಿರಾರು ಸಂಖ್ಯೆಯಲ್ಲಿ ರೈತರು ಟ್ರ್ಯಾಕ್ಟರ್, ಕುದುರೆ, ಕ್ರೇನ್ ಮೂಲಕ ದೆಹಲಿ ಒಳನುಗ್ಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

Advertisement

ಷರತ್ತನ್ನು ಉಲ್ಲಂಘಿಸಿ ಟ್ರ್ಯಾಕ್ಟರ್ ಮೂಲಕ ಒಳನುಗ್ಗುತ್ತಿರುವ ರೈತರನ್ನು ತಡೆಯಲು ಪೊಲೀಸರು ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ ನಡೆಸಿದ್ದರು ಕೂಡಾ ಯಾವುದಕ್ಕೂ ಜಗ್ಗದ ಪ್ರತಿಭಟನಾಕಾರರು ದೊಣ್ಣೆಯಿಂದ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.

ಇದರಿಂದ ಆಕ್ರೋಶಗೊಂಡ ಪೊಲೀಸರು ರೈತರ ಮೇಲೆ ಲಾಠಿಚಾರ್ಜ್ ನಡೆಸಿದ್ದು, ರೈತರು ಕೂಡಾ ಟ್ರ್ಯಾಕ್ಟರ್ ಅನ್ನು ಬಿಟ್ಟು ದಿಕ್ಕಾಪಾಲಾಗಿ ಓಡುತ್ತಿರುವ ದೃಶ್ಯ ಸೆರೆಯಾಗಿದೆ.

ಏತನ್ಮಧ್ಯೆ ಗಣರಾಜ್ಯೋತ್ಸವ ಪರೇಡ್ ಆರಂಭವಾಗುವ ಮುನ್ನವೇ ರೈತರು ಔಟರ್ ರಿಂಗ್ ರೋಡ್ ಮೂಲಕ ಪ್ರವೇಶಿಸಲು ಯತ್ನಿಸಿದ್ದರಿಂದ ಘರ್ಷಣೆ ನಡೆಯಲು ಕಾರಣವಾಗಿರುವುದಾಗಿ ವರದಿ ತಿಳಿಸಿದೆ.


ಸೆಂಟ್ರಲ್ ದೆಹಲಿಯ ಐಟಿಒನಲ್ಲಿ ಪ್ರತಿಭಟನಾ ನಿರತ ರೈತರು ಪೊಲೀಸರ ಮೇಲೆ ಹಲ್ಲೆ ನಡೆಸಿದ ಪರಿಣಾಮ ಹಲವು ಪೊಲೀಸರು ಗಾಯಗೊಂಡಿರುವುದಾಗಿ ವರದಿ ತಿಳಿಸಿದೆ. ಅಲ್ಲದೇ ಪೊಲೀಸರ ಬಸ್ ಅನ್ನು ಹೈಜಾಕ್ ಮಾಡಲಾಗಿದೆ ಎಂದು ವರದಿ ವಿವರಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next