Advertisement
ಪೆರ್ಲಂಪಾಡಿಯಲ್ಲಿ ಮೆಡಿಕಲ್ ಶಾಪ್ ತೆರೆಯಲು ಪೂರ್ವ ತಯಾರಿಗಾಗಿ ಚರಣ್‌ರಾಜ್ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿ ಪರಾರಿಯಾಗಿದ್ದರು. ಈ ಸಂಬಂಧ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದಲ್ಲಿ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಡಿ 7ನೇ ಆರೋಪಿಯನ್ನಾಗಿ ಪ್ರಜ್ವಲ್ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು. ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ತಿರಸ್ಕರಿಸಿತ್ತು. ಆ ಬಳಿಕ ಪ್ರಜ್ವಲ್‌ರವರು ನಿರೀಕ್ಷಣಾ ಜಾಮೀನು ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
Advertisement
ಚರಣ್‌ರಾಜ್ ರೈ ಪ್ರಕರಣ: 7ನೇ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು
10:36 PM Aug 05, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.