Advertisement

ಚಾರ್ಜ್‌ ಪಾಯಿಂಟ್‌ ಅವಶ್ಯ?

08:35 AM Oct 26, 2018 | Team Udayavani |

ಹೊಸದಿಲ್ಲಿ: ದೇಶದಲ್ಲಿ 2030ರ ವೇಳೆಗೆ ಹೆಚ್ಚಿನ ಪ್ರಮಾಣದಲ್ಲಿ ಎಲೆಕ್ಟ್ರಿಕ್‌ ವಾಹನಗಳೇ ಇರಬೇಕೆನ್ನುವ ಗುರಿ ಹೊಂದಿರುವ ಕೇಂದ್ರ ಸರಕಾರ ಈಗ ಪ್ರತಿಯೊಂದು ಮನೆ, ವಾಣಿಜ್ಯ ಕಟ್ಟಡ ಹಾಗೂ ಪಾರ್ಕಿಂಗ್‌ ಸ್ಥಳಗಳಲ್ಲಿ ವಿದ್ಯುತ್‌ಚಾಲಿತ ವಾಹನಗಳ ಚಾರ್ಜಿಂಗ್‌ ಪಾಯಿಂಟ್‌ ಕಡ್ಡಾಯಗೊಳಿಸಲು ಮುಂದಾಗಿದೆ. ಇದಕ್ಕಾಗಿ ಕಟ್ಟಡಗಳಿಗೆ ಸಂಬಂಧಿಸಿದ ಬೈಲಾಗಳಿಗೆ ತಿದ್ದುಪಡಿ ತರಲು ಸರಕಾರ ಮುಂದಾಗಿದೆ. ಈ ಕುರಿತು ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಎಲ್ಲಾ ರೀತಿಯ ಎಲೆಕ್ಟ್ರಿಕ್‌ ವಾಹನಗಳ ಬ್ಯಾಟರಿ ಚಾರ್ಜ್‌ ಮಾಡಬಲ್ಲ ವ್ಯವಸ್ಥೆಯನ್ನು ಪ್ರತಿಯೊಂದು ಮನೆ, ವಾಣಿಜ್ಯ ಕೇಂದ್ರ ಹಾಗೂ ಪಾರ್ಕಿಂಗ್‌ ಸ್ಥಳಗಳಲ್ಲಿ ಕಡ್ಡಾಯವಾಗಿ ಅಳವಡಿಸಬೇಕೆಂದು ಪ್ರಸ್ತಾವನೆಯಲ್ಲಿ ಉಲ್ಲೇಖೀಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

Advertisement

ಗೃಹ ಮತ್ತು ನಗರಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿರುವ ಪಟ್ಟಣ ಮತ್ತು ರಾಷ್ಟ್ರ ನಿರ್ಮಾಣ ಯೋಜನಾ ಸಂಸ್ಥೆಯು ಪ್ರಸ್ತಾವನೆಯನ್ನು ಸಿದ್ಧಗೊಳಿಸಿದ್ದು, ಬಸ್‌ ನಿಲ್ದಾಣ ಹಾಗೂ ಸೇವಾ ಕೇಂದ್ರಗಳಿಗೂ ಈ ನಿಯಮ ಅನ್ವಯಿಸುತ್ತದೆ ಎಂದು ಹೇಳಿದೆ. ಅಲ್ಲದೆ, ಎಲೆಕ್ಟ್ರಿಕ್‌ ವಾಹನಗಳನ್ನು ಹೆಚ್ಚಿಸುತ್ತಾ ಹೋಗುವ ಉದ್ದೇಶವನ್ನೂ ಹೊಂದಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next