Advertisement

ನಾಳೆ ಪೆರ್ಡೂರು ರಥೋತ್ಸವ

10:47 AM Mar 15, 2017 | Team Udayavani |

ಹೆಬ್ರಿ: ಉಡುಪಿ ತಾಲೂಕಿನ ಪೆರ್ಡೂರು ಕದಳೀಪ್ರಿಯ ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಮಹೋತ್ಸವ ಮಾ. 12 ರಂದು ಆರಂಭಗೊಂಡಿದ್ದು, 19ರ ವರೆಗೆ ಕ್ಷೇತ್ರದ ಕೆ.ಜಿ. ರಾಘವೇಂದ್ರ ತಂತ್ರಿ ಧಾರ್ಮಿಕ ನೇತೃತ್ವದಲ್ಲಿ ವಿವಿಧ ವಿಧಿವಿಧಾನಗಳೊಂದಿಗೆ ಜರಗಲಿದೆ. ಮಾ. 16ರಂದು ಶ್ರೀಮನ್ಮಹಾರಥೋತ್ಸವ ನಡೆಯಲಿದೆ.
ಬೆಳಗ್ಗೆ ಪ್ರಧಾನ ಹೋಮ, ಕಲಶಾಭಿ ಷೇಕ, ರಥಹೋಮ, ರಥಸಂಪ್ರೋಕ್ಷಣೆ, ಕೊಡಿಪೂಜೆ, ಮಹಾಪೂಜೆ, ಮಧ್ಯಾಹ್ನ ರಥಾರೋಹಣ, ಸಂಜೆ 6ಕ್ಕೆ ಶ್ರೀಮನ್ಮಹಾರಥೋತ್ಸವ, ರಾತ್ರಿ ದೀವಟಿಕೆ ಸಲಾಮ್‌, ನರ್ತನ, ವಾದ್ಯ ಸೇವಾದಿ, ಹಚ್ಚಡ ಸೇವೆ, ರಥಾವರೋಹಣ, ಪಲ್ಲಕ್ಕಿ ಸುತ್ತು, ತೆಪ್ಪೋತ್ಸವ, ವಾಲಗಮಂಟಪ ಪೂಜೆ, ವೇದಪಾರಾಯಣ, ಸಂಗೀತ ವಾದ್ಯ, ನರ್ತನ ಸೇವೆ, ಮಹಾಪೂಜೆ, ಶ್ರೀಭೂತಬಲಿ, ಕವಾಟಬಂಧನ, ಶಯನೋಲಗ ಮೊದಲಾದ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಮೋದ್‌ ರೈ ಪಳಜೆ ಹಾಗೂ ಆಡಳಿತಾಧಿಕಾರಿ ಪೂರ್ಣಿಮಾ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next