ರಕ್ಷಿತ್ ಶೆಟ್ಟಿ ನಟನೆಯ “777 ಚಾರ್ಲಿ’ ಚಿತ್ರ ಜೂನ್ 10ಕ್ಕೆ ಬಿಡುಗಡೆಯಾಗಲಿದೆ. ಇದು ಕೂಡಾ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಎಲ್ಲಾ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಈಗ ಮೊದಲ ಹಂತವಾಗಿ ಚಿತ್ರ ತನ್ನ ಬಿಝಿನೆಸ್ ಮೂಲಕ ಸುದ್ದಿಯಲ್ಲಿದೆ. ಚಿತ್ರದ ಕನ್ನಡ ವರ್ಶನ್ ಸ್ಯಾಟ್‌ಲೈಟ್ ಹಾಗೂ ಡಿಜಿಟಲ್ ರೈಟ್ಸ್ ಖಾಸಗಿ ವಾಹಿನಿಯೊಂದಕ್ಕೆ ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ. ಈ ಮೂಲಕ ರಕ್ಷಿತ್ ಶೆಟ್ಟಿ ಮೊಗದಲ್ಲಿ ನಗುಮೂಡಿದೆ.
ಚಿತ್ರರಂಗದ ಮೂಲಗಳ ಪ್ರಕಾರ, 21 ಕೋಟಿ ರೂಪಾಯಿಗೆ ಕನ್ನಡ ವರ್ಶನ್‌ನ ಸ್ಯಾಟ್‌ಲೈಟ್ ಹಾಗೂ ಡಿಜಿಟಲ್ ರೈಟ್ಸ್ ಮಾರಾಟವಾಗಿದೆ. ಉಳಿದಂತೆ ಈಗಾಗಲೇ ಮುಂಬೈ, ತಮಿಳು, ಹಿಂದಿ ಹಾಗೂ ಮಲಯಾಳಂನ ಪ್ರತಿಷ್ಠಿತ ಸಿನಿಮಾ ಸಂಸ್ಥೆಗಳು “777 ಚಾರ್ಲಿ’ ಚಿತ್ರದ ಬಿಡುಗಡೆಗೆ ಮುಂದಾಗಿವೆ.
ಯುವ ನಿರ್ದೇಶಕ ಕಿರಣ್ ರಾಜ್ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ “777 ಚಾರ್ಲಿ’ ಚಿತ್ರದಲ್ಲಿ ರಕ್ಷಿತ್ ಶೆಟ್ಟಿಯ ಜೊತೆಗೆ ಲ್ಯಾಬ್ರಡಾರ್ ನಾಯಿ ಒಂದು ಪೂರ್ಣ ಪ್ರಮಾಣದ ಪಾತ್ರದಲ್ಲಿ ತೆರೆಮೇಲೆ ಕಾಣಿಸಿಕೊಂಡಿದೆ.
ಇದನ್ನೂ ಓದಿ:6 ವರ್ಷದ ಬಳಿಕ ಐಪಿಎಲ್ ಆಡಲಿಳಿದ ರಿಷಿ ಧವನ್ ಫೇಸ್ ಶೀಲ್ಡ್ ಧರಿಸಿದ್ದೇಕೆ?
ಸಂಗೀತಾ ಶೃಂಗೇರಿ ಚಿತ್ರದಲ್ಲಿ ನಾಯಕಿಯಾಗಿದ್ದು, ಉಳಿದಂತೆ ರಾಜ್ ಬಿ. ಶೆಟ್ಟಿ, ಡ್ಯಾನಿಶ್ ಸೇಠ್, ಬಾಬಿ ಸಿಂಹ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಕಾಣಿಸಿ ಕೊಂಡಿದ್ದಾರೆ. ಚಿತ್ರದ ಹಾಡುಗಳಿಗೆ ನೋಬಿನ್ ಪೌಲ್ ಸಂಗೀತ ಸಂಯೋಜಿಸಿದ್ದಾರೆ.
“ಪರಂವಾ ಸ್ಟುಡಿಯೋಸ್’ ಬ್ಯಾನರ್ ಅಡಿಯಲ್ಲಿ “777 ಚಾರ್ಲಿ’ ಚಿತ್ರಕ್ಕೆ ಜಿ. ಎಸ್ ಗುಪ್ತಾ ಮತ್ತು ರಕ್ಷಿತ್ ಶೆಟ್ಟಿ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿದ್ದಾರೆ.