ಮೂಡಿಗೆರೆ: ಚಿಕ್ಕಮಗಳೂರು ಹಾಗೂ ಕರಾವಳಿಯನ್ನು ಸಂಪರ್ಕಿಸುವ ಚಾರ್ಮುಡಿ ಘಾಟಿ ರಸ್ತೆಯ ತಿರುವಿನಲ್ಲಿ ಗುರುವಾರ ಮಧ್ಯಾಹ್ನ 10 ಚಕ್ರದ ಲಾರಿಯೊಂದು ಸಿಕ್ಕಿಹಾಕಿಕೊಂಡು ಸಂಚಾರಕ್ಕೆ ಅಡಚಣೆಯಾದ ಘಟನೆ ನಡೆದಿದೆ.
ಒಂದು ಗಂಟೆಗೂ ಹೆಚ್ಚುಕಾಲ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಸಂಚಾರಕ್ಕೆ ತಡೆ ಉಂಟಾಗಿತ್ತು, ಬಳಿಕ ಸ್ಥಳೀಯರು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂದರ್ಭದಲ್ಲಿ ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಪರೀಕ್ಷಿತ್ ಜಾವಳಿ ಇದ್ದರು.
ಚಾರ್ಮಾಡಿ ಘಾಟ್ ನಲ್ಲಿ ಭಾರಿ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿದ್ದರೂ ಪೊಲೀಸರ ಕಣ್ತಪ್ಪಿಸಿ ಬಂಡ ಈ ಘನ ವಾಹನದಿಂದ ಉಳಿದ ವಾಹನ ಸವಾರರಿಗೆ ತೊಂದರೆಯಾಯಿತು.
ಲಾರಿಯು ಚಿಕ್ಕಮಗಳೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿತ್ತು.